ಚಾಮರಾಜನಗರ ಜಿಲ್ಲೆ: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೈಮಹದೇಶ್ವರ ದೇವಸ್ಥಾನದಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ, ನವೆಂಬರ್ 1ರಿಂದ ದಿನನಿತ್ಯದ ಪೂಜೆ, ಸೇವಾಕೈಂಕರ್ಯಗಳಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅವಕಾಶ ಮಾಡಿ ಕೊಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಭಕ್ತಾದಿಗಳ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ದೇಗುಲದ ಒಳಗಡೆ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲು ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಮಾತ್ರ ಇದುವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಇಳಿಕೆಯಾಗಿರುವುದರಿಂದ ಕೇಂದ್ರ/ರಾಜ್ಯ ಸರಕಾರದ ಷರತ್ತುಗಳಿಗೊಳಪಟ್ಟು ಶ್ರೀ ಮಲೈ ಮಹದೇಶ್ವರ ದೇಗುಲದಲ್ಲಿ (ದಾಸೋಹ ಮತ್ತು ಜಾತ್ರೆಗಳನ್ನು ಹೊರತುಪಡಿಸಿ) ದೈನಂದಿನ ಧಾರ್ಮಿಕ ಸೇವೆಗಳನ್ನು ಪುನರಾರಂಭಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.