ಆಶ್ವೀಜ ಶುದ್ಧ ತ್ರಯೋದಶಿಯಂದು ನೀರು ತುಂಬುವ ಹಬ್ಬದ ಆಚರಣೆ ಮಾಡಲಾಗುತ್ತದೆ.
ಅಂದು ನೀರು ತುಂಬಿಸುವ ಪಾತ್ರೆ ಮತ್ತು ನೀರು ಕಾಯಿಸುವ ಹಂಡೆಗಳನ್ನು ತೊಳೆದು ಅವನ್ನು ಅಲಂಕರಿಸಬೇಕು. ಅನಂತರ ಸಮೀಪದ ಬಾವಿ, ಕೆರೆ, ನದಿಯಿಂದ ನೀರು ತಂದು ತುಂಬಿಸಿ, ಗಂಗೆ ಪೂಜೆ ಮಾಡಬೇಕು.
ದೇವರ ಮುಂದೆ ಮಂಡಲವನ್ನು ಹಾಕಿ (ನೀರಿನಲ್ಲಿ), ರಂಗೋಲಿಯನ್ನು ಬರೆದು, ಅದನ್ನು ಅಲಂಕರಿಸಿ, ಗಂಗೆಯನ್ನು ಒಂದು ಪಾತ್ರೆಯಲ್ಲಿ ಇಟ್ಟು ದೇವರಿಗೆ ಸಮರ್ಪಿಸಬೇಕು. ದೇವರ ಮುಂದೆ ಮತ್ತು ತುಳಸೀ ಗಿಡದ ಮುಂದೆ ದೀಪವನ್ನು ಹಚ್ಚಿ, ಆಚಮನ ಮಾಡಿ, ಸಂಕಲ್ಪ ಪುರಸ್ಸರವಾಗಿ, ದ್ವಾದಶ ನಾಮಗಳಿಂದ ಗಂಗೆಯನ್ನು ಪೂಜಿಸಿ, ಸಕಲ ತೀರ್ಥಾಭಿಮಾನಿ ದೇವತೆಗಳನ್ನು ಸ್ಮರಿಸಿ, ನೈವೇದ್ಯವನ್ನು ಮಾಡಿ, ನೀರಾಜನವನ್ನು ಸಮರ್ಪಿಸಿ, ಗಂಗೆಯನ್ನು ಪೂಜಿಸಬೇಕು, ಇಲ್ಲಿ ನೀರೇ ಗಂಗೆಯಲ್ಲ.
ಅದರಲ್ಲಿ ಗಂಗಾದಿ ಸಕಲ ತೀರ್ಥಾಭಿಮಾನಿ ದೇವತೆಗಳು ಸನ್ನಿಹಿತರಾಗಿರುತ್ತಾರೆ ಎಂದು ಭಾವಿಸಬೇಕು.
ಗಂಗೇ ಚ ಯಮುನೇ ಚೈವ ಗೋದಾವರೀ ಸರಸ್ವತಿ | ನರ್ಮದೇ ಸಿಂದು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು | ಗಂಗಾಯೈ ನಮ: | ಗಂಗಾಂ ಅಸ್ಮಿನ್ ಕಲಶೇ ಆವಾಹಯಾಮಿ, ಅರ್ಘ್ಯಪಾದ್ಯ ಆಚಮಾನೀಯಾದಿ ಸರ್ವೋಪಚಾರ ಪೂಜಾಂ ಸಮರ್ಪಯಾಮಿ | ಎಂದು ಹೇಳಬೇಕು