ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ಸಾನ್ನಿಧ್ಯ

ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ದೀಪೋತ್ಸವ

ಆದಿಚುಂಚನಗಿರಿ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಕಾರ್ತಿಕ ಸೋಮವಾರದ ಪ್ರಯುಕ್ತ ಆಯೋಜಿಸಲಾಗಿದ್ದ ದೇವರ ಉತ್ಸವ, ಭಜನೆ ಹಾಗೂ ದೀಪೋತ್ಸವ ಪೂಜಾ ಕಾರ್ಯಕ್ರಮಗಳು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ಸಾನ್ನಿಧ್ಯದಲ್ಲಿ ನೆರವೇರಿತು.

ಪೂಜಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles