ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ಸಾನ್ನಿಧ್ಯ

ಶ್ರೀ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಶ್ರೀ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ 2019-2020ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ಸಾನ್ನಿಧ್ಯ ವಹಿಸಿ ಆಶಿರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಗುಣನಾಥಸ್ವಾಮೀಜಿಯವರು, ಶ್ರೀ ಶಂಭುನಾಥ ಸ್ವಾಮೀಜಿಯವರು,ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು, ಸಿ ಕೆ ಸುಬ್ಬರಾಯರು, ಕುಲಸಚಿವರು, ಆದಿಚುಂಚನಗಿರಿ ವಿಶ್ವವಿದ್ಯಾಲಯ, ಶ್ರೀ ನಾಗರಾಜರವರು, ಉಪವಿಭಾಗಾಧಿಕಾರಿಗಳು, ಶ್ರೀ ಕೆ ನಾಗರಾಜ್ ರವರು, ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಶ್ರೀ B V ಮಲ್ಲೇಶಪ್ಪನವರು, ಉಪನಿರ್ದೇಶಕರು, ಸಾ.ಶಿ.ಇ ಚಿಕ್ಕಮಗಳೂರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles