ಜನವರಿ 14, 15ರಂದು ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಹರ ಜಾತ್ರಾ ಮಹೋತ್ಸವ

ಹರಿಹರ: ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹರಜಾತ್ರಾ ಮಹೋತ್ಸವ ಜನವರಿ 14, 15ರಂದು ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿದೆ.

ಲಿಂಗೈಕ್ಯ ಡಾ.ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ

ಜ. 14ರಂದು ಬೆಳಗ್ಗೆ 11 ಗಂಟೆಗೆ ‘ಸ್ವಾವಲಂಬಿ ಸಮಾವೇಶ’ ನಡೆಯಲಿದೆ. ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಹರದ್ವಾರ ಉದ್ಘಾಟನೆ ಮಾಡಲಿದ್ದಾರೆ. ಪಂಚಮಸಾಲಿ ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಅಧ್ಯಕ್ಷತೆ ವಹಿಸುವರು. ಬೀಳಗಿ ಶಾಸಕ ಮುರುಗೇಶ ನಿರಾಣಿ ಭಾಗವಹಿಸಲಿದ್ದಾರೆ. ಪಂಚಮಸಾಲಿ ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಚಂದ್ರಶೇಖರ ಪೂಜಾರ ಸ್ವಾಗತಿಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ “ಸಂಕ್ರಾಂತಿ ಸಂಭ್ರಮ’ವನ್ನುಉದ್ಘಾಟಿಸಲಿದ್ದು, ಮಹಾರಾಷ್ಟç ಸರ್ಕಾರದ ವೀರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಸ್ವಾವಲಂಬಿ ಸಮಾವೇಶ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವತ್ ನಾರಾಯಣ, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕೇಂದ್ರ ಸಂಸದೀಯ ಕಾರ್ಯದರ್ಶಿ ಪ್ರಹ್ಲಾದ್ ಜೋಷಿ, ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಅರಣ್ಯ ಸಚಿವ ಆನಂದ ಸಿಂಗ್, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.


ಅಂದು ಮಧ್ಯಾಹ್ನ3 ಗಂಟೆಗೆ “ಭೂತಪಸ್ವಿ ಸಮಾವೇಶ’ ನಡೆಯಲಿದ್ದು ಇಳಕಲ್ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಶ್ರೀ ಗುರುಮಹಾಂತ ಶಿವಯೋಗಿಗಳು ಹಾಗೂ ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.
ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಭೂತಪಸ್ವಿ ಸಮಾವೇಶ ಉದ್ಘಾಟಿಸುವರು. ವಸತಿ ಸಚಿವ ವಿ ಸೋಮಣ್ಣ ಪಂಚವಾಣಿ ಮಾಸಪತ್ರಿಕೆ ಬಿಡುಗಡೆ ಮಾಡಲಿದ್ದಾರೆ. ಯೋಗ ಕ್ಯಾಲೆಂಡರ್ ಅನ್ನು ಮಾಜಿಕೇಂದ್ರ ಸಚಿವ ಬಸವನಗೌಡ ಪಾಟೀಲ ಯತ್ನಾಳ ಬಿಡುಗಡೆಗೊಳಿಸುವರು.
ಸಂಜೆ6 ಗಂಟೆಗೆ ಅರ್ಜುನ್ ಇಟಗಿ ಅವರಿಂದ ರಸಮಂಜರಿ ಕಾರ್ಯಕ್ರಮ.


ಜ.15 ರಂದು ಬೆಳಗ್ಗೆ 11.30ಕ್ಕೆ “ಯುವ ಸಮಾವೇಶ’ ನಡೆಯಲಿದೆ. ಗೌರಿಗದ್ದೆ ಮಹಾತ್ಮಾ ಗಾಂಧಿ ಸೇವಾ ಟ್ರಸ್ಟ್ ನ ಶ್ರೀ ಅವಧೂತ ವಿನಯ್ ಗುರೂಜಿ ಹಾಗೂ ಬೆಂಗಳೂರು ಬಿಜೆಎಸ್, ಎಸ್‌ಜೆಬಿ ಸಮೂಹ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಶ್ರೀ ಪ್ರಕಾಶ್‌ನಾಥ್ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ.
ವಿಜಯಪುರದ ಸ್ಪರ್ಶ ಫೌಂಡೇಶನ್‌ನ ಸಂಯುಕ್ತಾ ಪಾಟೀಲ, ನಟ ಪುನೀತ್ ರಾಜ್‌ಕುಮಾರ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3ಗಂಟೆಗೆ ಶ್ವಾಸಗುರು ಪಂಚಮಸಾಲಿ ಜಗದ್ಗುರು ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ತೃತೀಯ ಪೀಠಾರೋಹಣದ ಕಾರ್ಯಕ್ರಮಗಳು ನಡೆಯಲಿವೆ.

ಹುಬ್ಬಳ್ಳಿ ಮೂರು ಶ್ರೀ ಜಗದ್ಗುರು ಮೂರುಸಾವಿರ ಮಠ ಮಹಾಸಂಸ್ಥಾನದ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶಾಖಾ ಮಠ ಹಗರಿಬೊಮ್ಮನಹಳ್ಳಿಯ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು.

ಹರಜಾತ್ರಾ ಹಿನ್ನೆಲೆ

ಜಗದ್ಗುರು ಡಾ.ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರು ಲಿಂಗೈಕ್ಯರಾದ ನಂತರ ಅವರ ಉತ್ತರಾಧಿಕಾರಿಯಾಗಿ ಶ್ವಾಸಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರುಗಳಾದರು.ಜಗತ್ತಿನ ಹಲವಾರು ದಏಶ ಸುತ್ತಿ ವಿಶ್ವದಾದ್ಯಂತ ಲಕ್ಷಾಂತರ ಯೋಗ ಗುರುಗಳನ್ನು ಹೊಂದಿರುವ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಪಂಚಮಸಾಲಿ ಸಮುದಾಯದ ಅಭಿವೃದ್ಧಿಗಾಗಿ ಹೊಸ ದೃಷ್ಟಿಕೋನವನ್ನು ಹುಟ್ಟುಹಾಕಿದ್ದಾರೆ.
ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಪಂಚಮಸಾಲಿ ಪೀಠ ಅಲಂಕರಿಸಿದ ಮೇಲೆ ಹಲವು ಮಹತ್ವದ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಜನವರಿ 14, 15 ಸಂಕ್ರಾಂತಿಯಂದು ಸ್ವಾಮೀಜಿ ಅವರ ನೇತೃತ್ವದಲ್ಲಿ ಹರ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡು ಬರಲಾಗುತ್ತಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles