ಹಿರಿಯ ವಿದ್ಯಾರ್ಥಿಗಳ ವೇದಿಕೆ ಸಮಾರಂಭ

ಆದಿಚುಂಚನಗಿರಿಯಲ್ಲಿ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ 8ನೇ ಪುಣ್ಯಸ್ಮರಣೆ

ಆದಿಚುಂಚನಗಿರಿ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜನವರಿ 15ರಂದು ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಎಂಟನೇ ವಾರ್ಷಿಕ ಸಂಸ್ಮರಣೋತ್ಸವದ ಪ್ರಯುಕ್ತ ‘ಹಿರಿಯ ವಿದ್ಯಾರ್ಥಿಗಳ ವೇದಿಕೆ ಸಮಾರಂಭ’ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಯವರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಪೂಜ್ಯ ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related Articles

ಪ್ರತಿಕ್ರಿಯೆ ನೀಡಿ

Latest Articles