ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯ

3ನೇ ದಿನಕ್ಕೆ ಕಾಲಿಟ್ಟ ಬಸವ ಮೃತ್ಯುಂಜಯ ಸ್ವಾಮಿಗಳ ಪಾದಯಾತ್ರೆ

ಬಸವ ಮೃತ್ಯುಂಜಯ ಸ್ವಾಮಿ

ಪಂಚಮಸಾಲಿ ಸಮಾಜವನ್ನು 2ಎ ಮೀಸಲಾತಿಗೆ ಒಳಪಡಿಸಬೇಕೆಂದು ಒತ್ತಾಯಿಸಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಮೃತ್ಯುಂಜಯ ಸ್ವಾಮಿಗಳು ಕೂಡಲಸಂಗಮದಿಂದ ಬೆಂಗಳೂರಿಗೆ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು 3ನೇ ದಿನಕ್ಕೆ ಕಾಲಿಟ್ಟಿದೆ.
ಜನವರಿ 14ರಂದು ಕೂಡಲಸಂಗಮದಿಂದ ಪಾದಯಾತ್ರೆ ಆರಂಭಿಸಿದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜನವರಿ 16ರಂದು ಕಡೆಕೊಪ್ಪ ಗ್ರಾಮದಿಂದ ಕುಷ್ಠಗಿ ಕಡೆ ಪಾದಯಾತ್ರೆ ಬೆಳೆಸಿದರು. ಈ ಸಂದರ್ಭದಲ್ಲಿ ಗ್ರಾಮದ ಜನತೆ ಮಾರ್ಗದುದ್ದಕ್ಕೂ ಸ್ವಾಮೀಜಿ ಅವರಿಗೆ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು.

ದಿನಕ್ಕೆ 20 ಕಿಮೀ ನಂತೆ ಒಂದು ತಿಂಗಳವರೆಗೆ 700 ಕಿಮೀ ಪಾದಯಾತ್ರೆ ನಡೆಸುವ ನಿರ್ಧಾರ ಕೈಗೊಂಡಿರುವ ಶ್ರೀಗಳು ಕೊನೆಯ ದಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕಳೆದ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles