ಉಡುಪಿ ಶ್ರೀಕೃಷ್ಣ ಮಠದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಕ್ತಾದಿಗಳಿಗೆ ದೇವರ ದರ್ಶನದ ಸರತಿ ಸಾಲಿನ ವ್ಯವಸ್ಥೆಯಾದ “ವಿಶ್ವಪಥ”ವನ್ನು ಉದ್ಘಾಟಿಸಿರು. ನಂತರ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ನಡೆಯುತ್ತಿರುವ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ ಹೆಗಡೆ ಕಾಗೇರಿ, ಮೀನುಗಾರಿಕೆ ಮತ್ತು ಮಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಲಿ ಮೆಂಡನ್, ಮಾಜಿ ಸಚಿವ ಜೀವರಾಜ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂಡಿ ಹಾಗೂ ಸಿಇಒ ರಾಜ್‌ಕಿರಣ್ ರೈ, ಕಟೀಲಿನ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಉಪಸ್ಥಿತರಿದ್ದರು.
ಸಾಧಕರಾದ ಹೆರಂಜೆ ಕೃಷ್ಣ ಭಟ್, ಅಚ್ಚುತ ಭಟ್ ಉಡುಪಿ, ಭುವನೇಂದ್ರ ಕಿದಿಯೂರು, ದೈವಜ್ಞ ಬ್ರಾಹ್ಮಣ ಸಂಘ ಉಡುಪಿ, ದೈವಜ್ಞ ಬ್ರಾಹ್ಮಣ ಯುವಕ ಸಂಘಗಳನ್ನು ಸನ್ಮಾನಿಸಲಾಯಿತು.
ಪರ್ಯಾಯ ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ಸ್ವಾಗತಿಸಿ, ಕೃಷ್ಣರಾಜ್ ಕುತ್ಪಾಡಿ ಕಾರ್ಯಕ್ರಮ ನಿರೂಪಿಸಿದರು.