ಡಾ.ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರ ವೇದ ಸಾಧನೆಗೆ ಪದ್ಮಶ್ರೀ ಪ್ರಶಸ್ತಿಯ ಗರಿ

ಡಾ.ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರ ನಾಲ್ಕು ವೇದಗಳನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಿದ್ದಾರೆ. ಅಲ್ಲದೇ ವೇದ ಸೂಕ್ತಗಳಿಗೆ ಸಂಬ0ಧಿಸಿದ0ತೆ ಸುಮಾರು 25 ಪುಸ್ತಕಗಳನ್ನು ಬರೆದಿದ್ದಾರೆ.

ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಆರಂಭದ ಶಿಕ್ಷಣ ಪಡೆದ ಅವರು ಹಾರ್ವರ್ಡ್ ವಿವಿಯಿಂದ 1966 ರಲ್ಲಿ ಪಿಎಚ್‌ಡಿ ಪಡೆದಿದ್ದರು. 2012 ರಲ್ಲಿ ಅವರಿಗೆ ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಸಾಕ್ಷಿ ಟ್ರಸ್ಟ್ನ ಸಂಸ್ಥಾಪಕ ಮತ್ತು ಗೌರವ ನಿರ್ದೇಶಕರಾಗಿದ್ದಾರೆ. ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆಯಾದ ಭಾರತೀಯ ವಿಜ್ಞಾನ ಮಂದಿರದಲ್ಲಿ ಪದವಿ, ಅಮೆರಿಕದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ, ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಮೂರೂವರೆ ದಶಕಗಳ ಕಾಲ ಇಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪನ, ಪ್ಯಾಟರ್ನ್ ರೆಕಗ್ನಿಷನ್ ಮತ್ತು ಮೆಷಿನ್ ಇಂಟೆಲಿಜೆನ್ಸ್ ವಿಭಾಗಗಳಲ್ಲಿ ಉದ್ದಾಮ ಸಂಶೋಧನೆ, ಅಂತಾರಾಷ್ಟ್ರೀಯ ವಿಜ್ಞಾನ ಜರ್ನಲ್‍ಗಳಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳ ಪ್ರಕಟಣೆ, 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ, ಜೆ.ಸಿ. ಬೋಸ್ ಅವಾರ್ಡ್, ನ್ಯಾಷನಲ್ ಇಲೆಕ್ಟ್ರಾನಿಕ್ಸ್ ಕಾನ್ಫರೆನ್ಸ್ ನಲ್ಲಿ ಬೆಸ್ಟ್ ಪೇಪರ್ ಅವಾರ್ಡ್ ಇತ್ಯಾದಿ ಪ್ರಶಸ್ತಿ-ಪುರಸ್ಕಾರಗಳು, 50 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಮಾರ್ಗದರ್ಶನ ಮಾಡಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles