ಭಗವದ್ಗೀತೆ ಪ್ರಬಂಧ ಸ್ಪರ್ಧೆ, ವಿಜೇತರಿಗೆ ಬಹುಮಾನ ವಿತರಣೆ

ಬೆಂಗಳೂರು: ಭಕ್ತಿವೇದಾಂತ ಶ್ರೀಲ ಪ್ರಭುಪಾದರು ಸ್ಥಾಪಿಸಿರುವ ಅಂತಾರಾಷ್ಟಿçÃಯ ಕೃಷ್ಣಪ್ರಜ್ಞಾ ಸಂಘ, ಗೀತ ಜಯಂತಿ 2020ರ ಪ್ರಯುಕ್ತ ರಾಜ್ಯಾದ್ಯಂತ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾಲೇಜು ವಿದ್ಯಾರ್ಥಿಗಳು ಭಗವದ್ಗೀತೆ ಪ್ರಬಂಧ ರಚನಾ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಪ್ರಬಂಧ ರಚಿಸಿದ್ದರು.

ಇವರಲ್ಲಿ ಒಟ್ಟು 12 ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ. ವಿಜೇತರಿಗೆ ರೂ. 50 ಸಾವಿರ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಇಸ್ಕಾನ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಶ್ರೀ ಚಂಚಲಪತಿದಾಸರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳಾದ ಪ್ರೊಫೆಸರ್ ಕೆ.ಈ ರಾಧಾಕೃಷ್ಣ ಮತ್ತು ಗೌರವ ಉಪಸ್ಥಿತಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊಫೆಸರ್ ಮಲ್ಲೇಪುರಂ ಜಿ ವೆಂಕಟೇಶ್, ಕಾರ್ಯಕ್ರಮದ ರೂವಾರಿ ಬೆಂಗಳೂರು ಇಸ್ಕಾನ್ ಸಂಸ್ಥೆ ಸಂಪರ್ಕ ಅಧಿಕಾರಿ ಕುಲಶೇಖರ ಚೈತನ್ಯ ದಾಸ ಮೊದಲಾದವರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles