ಆದಿಚುಂಚನಗಿರಿ ಶ್ರೀಗಳ ಸಾನ್ನಿಧ್ಯದಲ್ಲಿ ಗುರುವಂದನಾ ಕಾರ್ಯಕ್ರಮ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಗುರುವಂದನೆ ಮತ್ತು ಸಮರ್ಪಣಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಎಲ್ಲಾ ಪೂಜ್ಯ ಸ್ವಾಮೀಜಿಯವರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಕೆ ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಶ್ರೀ ಕಾವೇರಿ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಹೊಸೂರು ಸತೀಶ್ ಕುಮಾರ್ ಜೋಯಪ್ಪ, ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರುಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles