ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಜಾತ್ರೆ, ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಸೇವೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಕೋವಿಡ್ ಕಾರಣದಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ಸೇವೆಗಳಿಗೆ ನಿಷೇಧ ಹೇರಲಾಗಿತ್ತು.
ಕೋವಿಡ್ ನಿಯಮಗಳನ್ನು ಅನುಸರಿಸಿಕೊಂಡು ದೇವಸ್ಥಾನಗಳಲ್ಲಿ ಜಾತ್ರೆ, ಉತ್ಸವ, ರಥೋತ್ಸವ, ಬ್ರಹ್ಮರಥೋತ್ಸವ ವಿಶೇಷ ಪೂಜೆ, ಪ್ರಸಾದ ವಿತರಣೆ ಅನ್ನದಾಸೋಹ ಸೇರಿದಂತೆ ವಿವಿಧ ಧಾರ್ಮಿಕ ಸೇವೆ ನಡೆಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಹಾಗೂ ಈ ಸಂಬAಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.