ಕೋಟೇಶ್ವರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಉಡುಪಿ ಕೋಟೇಶ್ವರದ ಶಿಲ್ಪಿಗಳಿಂದ 80 ಅಡಿ ಎತ್ತರದ ರಥ ನಿರ್ಮಾಣಗೊಳ್ಳಲಿದ್ದು, ಮೇ 14 ರಂದು ಅಕ್ಷಯಾ ತೃತೀಯದಂದು ಮುಹೂರ್ತ ನಿಗದಿಪಡಿಸಲಾಗಿದೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರದ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ಅವರ ಪುತ್ರ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ರಥ ನಿರ್ಮಾಣಗೊಳ್ಳಲಿದೆ. ಮೂರು ವರ್ಷಗಳಲ್ಲಿ ರಥ ನಿರ್ಮಾಣ ಕೆಲಸ ಪೂರ್ಣಗೊಳ್ಳಲಿದೆ.
























