ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ

ಬೆಂಗಳೂರಿನ ಜಯನಗರದ 5 ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ “ಭಾರತ ಹುಣ್ಣಿಮೆ ವ್ಯಾಸ ಪೂರ್ಣಿಮಾ” ಪ್ರಯುಕ್ತ ಶ್ರೀ ಮಠದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಪುರೋಹಿತರಾದ ನಂದಕಿಶೋರಾಚಾರ್ಯರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳಾದ ಜಿ ಕೆ ಆಚಾರ್ಯರು ಉಪಸ್ಥಿತರಿದ್ದು ಹಾಗೂ ನೂರಾರು ಭಕ್ತರು ಭಾಗವಹಿಸಿ ಶ್ರೀಹರಿವಾಯುಗುರುಗಳ ಅನುಗ್ರಹಕ್ಕೆ ಪಾತ್ರರಾದರು.

Related Articles

ಪ್ರತಿಕ್ರಿಯೆ ನೀಡಿ

Latest Articles