ಇಂದಿನಿಂದ ನಿಡಸೋಸಿ ಮಠದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಸಂಕೇಶ್ವರ: ನಿಡಸೋಸಿ ಗ್ರಾಮದ ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಾ.2 ರಿಂದ 10ವರೆಗೆ ಶ್ರೀಮಠದ ಪೀಠಾಧಿಪತಿ ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿವೆ.

ಮಾ.3 ರಂದು ಶೇಗುಣಸಿ ವಿರಕ್ತಮಠದ ಮಹಾಂತ ದೇವರು ನೇತೃತ್ವ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಆಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಸಾಹಿತಿ ಡಾ. ಗುರುದೇವಿ ಹುಲ್ಲೆಪ್ಪನವರ ಭಾಗವಹಿಸುವರು.
ಮಾ.4 ರಂದು ಹಾರನಹಳ್ಳಿ ಕೋಡಿಮಠದ ಜಗದ್ಗುರು ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ  ವಿಆರ್‌ಎಲ್ ಸಮೂಹದ ಅಧ್ಯಕ್ಷ ಉದ್ಯಮಿ ಡಾ.ವಿಜಯ ಸಂಕೇಶ್ವರ ಉಪಸ್ಥಿತರಿರುವರು.
ಮಾ.5 ರಂದು ಇಳಕಲ್ ವಿಜಯ ಮಹಾಂತೇಶ್ವರ ಮಠದ ಗುರು ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪತ್ರಕರ್ತ ಗಣೇಶ ಅಮೀನಗಡ, ಬೆಂಗಳೂರು ಆರ್ಕಿಟೆಕ್ಟ್ ಸವಿತಾ ಎನ್. ಭಾಗವಹಿಸಲಿದ್ದಾರೆ.
ಮಾ.6 ರಂದು ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಹುಕ್ಕೇರಿ ಕ್ಯಾರಗುಡ್ಡದ ಅಭಿನವ ಮಂಜುನಾಥ ಮಹಾರಾಜರು ನೇತೃತ್ವವಹಿಸಲಿದ್ದು, ಕೊರೋನಾ ವಾರಿಯರ‍್ಸ್ ಮಾಧ್ಯಮ ಹಾಗೂ ಪತ್ರಕರ್ತರ ಸತ್ಕಾರ ಜರುಗಲಿದೆ.
ಮಾ.7 ರಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶ್ರೀಮಠದ 7 ನೇ ಪೀಠಾಧಿಪತಿ ಲಿಂ. ಜಗದ್ಗುರು ಚತುರ್ಥ ನಿಜಲಿಂಗೇಶ್ವರ ಸ್ವಾಮೀಜಿ ಪುಣ್ಯಸ್ಮರಣೋತ್ಸವ ಜರುಗಲಿದೆ.
ಮಾ.8 ರಂದು ಹಾವೇರಿ ನರಸಿಂಹಪುರದ ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಮಾ.9 ರಂದು ಬೆಳಗಾವಿ ರಾಮಕೃಷ್ಣ ಮಿಷನ್ ಸ್ವಾಮಿ ಆತ್ಮ ಪ್ರಾಣಾನಂದ ಸ್ವಾಮೀಜಿ, ಕುರಣಿ ಅಡವಿಸಿದ್ದೇಶ್ವರ ಸಂಸ್ಥಾನದ ಮಲ್ಲಿಕಾರ್ಜುನ ದೇವರು ನೇತೃತ್ವ ವಹಿಸಲಿದ್ದಾರೆ.
ಮಾ.10 ರಂದು ಪ್ರವಚನ ಮಹಾಮಂಗಲೋತ್ಸವ ಕಾರ್ಯಕ್ರಮದ ನೇತೃತ್ವವನ್ನು ಚಿಕ್ಕೋಡಿ ಸಂಪಾದನಾ ಸ್ವಾಮೀಜಿ ಹಾಗೂ ಶೇಗುಣಸಿ ಮಹಾಂತ ದೇವರು ವಹಿಸಲಿದ್ದು,
ಮಾ.11 ರಂದು ಸಂಜೆ 6 ಗಂಟೆಗೆ ಬೆಳ್ಳಿ ರಥೋತ್ಸವ ಮಹಾಶಿವಯೋಗ, ಮಾ. 12 ರಂದು ಮಧ್ಯಾಹ್ನ12 ಗಂಟೆಗೆ ಶ್ರೀ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ಮಹಾಪ್ರಸಾದ ಪೂಜಾ ಸಮಾರಂಭ ಪೀಠಾಧಿಪತಿ ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಗಳಿಂದ ನೆರವೇರಲಿದೆ. ಮಾ 13 ರಂದು ಜಂಗೀ ಕುಸ್ತಿ ಜರುಗಲಿವೆ.

Related Articles

ಪ್ರತಿಕ್ರಿಯೆ ನೀಡಿ

Latest Articles