ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆ

ತುಮಕೂರು: ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಕೃಪಾಶೀರ್ವಾದದೊಂದಿಗೆ ಸಿದ್ದಗಂಗಾ ಮಠದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಜರುಗುವ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಯು ಈ ಬಾರಿ ಮಾರ್ಚ್ 1ರಿಂದ ಆರಂಭಗೊ0ಡಿದ್ದು 15ರವರೆಗೆ ನಡೆಯಲಿದೆ.

ಕೋವಿಡ್ ಮಾರ್ಗಸೂಚಿ ಅನುಸರಿಸಿ ಭಕ್ತರು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಭಾಗವಹಿಸಬಹುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

15 ದಿನಗಳ ಕಾಲ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಡೆಯಲಿದ್ದು, ರೈತ ಸಮುದಾಯಕ್ಕೆ ಅರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯಲಿವೆ. ಕೈಗಾರಿಕಾ, ಕೃಷಿ, ಆರೋಗ್ಯ, ತೋಟಗಾರಿಕೆ, ಅರಣ್ಯ, ರೇಷ್ಮೆ, ನೀರಾವರಿ, ಶಿಕ್ಷಣ, ಪಶುಪಾಲನೆ, ಮೀನುಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಂಟಾಗಿರುವ ವೈಜ್ಞಾನಿಕ ಬದಲಾವಣೆಗಳನ್ನು ಪ್ರದರ್ಶನದಲ್ಲಿ ಜನರಿಗೆ ಪರಿಚಯಿಸಲಾಗುತ್ತದೆ.

ಶ್ರೀ ಸಿದ್ದಲಿಂಗೇಶ್ವರ ನಾಟಕ ಮಂಡಳಿ ವತಿಯಿಂದ ಶ್ರೀ ಜಗಜ್ಯೋತಿ ಬಸವೇಶ್ವರ ಎಂಬ ಭಕ್ತಿ ಪ್ರಧಾನ ಐತಿಹಾಸಿಕ ನಾಟಕ ನಡೆಯಲಿದ್ದು, ಕೊರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಪೂರಕ ಮುಂಜಾಗ್ರತಾ ಕ್ರಮಗಳನ್ನು ವಸ್ತು ಪ್ರದರ್ಶನದ ವೇಳೆ ತೆಗೆದುಕೊಳ್ಳಲಾಗಿದೆ ಎಂದು ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಕಾರ್ಯದರ್ಶಿ ಬಿ. ಗಂಗಾಧರಯ್ಯ ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles