ರಂಭಾಪುರಿ ಪೀಠ (ಬಾಳೆಹೊನ್ನೂರು): ಕೊರೊನಾ ಸೋಂಕಿನಿoದ ಕಳೆದ ಒಂದು ವರ್ಷ ಸಾಕಷ್ಟು ಸಾವು ನೋವುಗಳಾಗಿರುವುದನ್ನು ಮರೆಯುವಂತಿಲ್ಲ.
ಕೋವಿಡ್-19 ರ ಅಲೆಯ ಪ್ರಬಲತೆ ಒಂದು ಹಂತಕ್ಕೆ ಬರುತ್ತಿರುವಾಗಲೇ ಈಗ ಮತ್ತೆ ಎರಡನೇ ಅಲೆಯಾಗಿ ಹರಡುತ್ತಿರುವುದು ಆತಂಕದ ವಿಷಯವಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ಅವರು ಇಂದು ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಹಂತದ ಕೋವಿಡ್ ಲಸಿಕೆಯನ್ನು ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು.
ಇದಕ್ಕೆ ಜನರ ನಿರ್ಲಕ್ಷವೇ ಕಾರಣವಾಗಿದೆ ಎಂದರೆ ತಪ್ಪಾಗದು. ಆದ್ದರಿಂದ ಜನತೆ ಮೈ ಮರೆಯದೇ ತಪ್ಪದೇ ಪರಸ್ಪರ ಒಂದು ಮೀಟರ್ ಅಂತರ ಕಾಪಾಡಿಕೊಳ್ಳುವುದು. ಮಾಸ್ಕ್ ಧರಿಸುವುದು ಸ್ಯಾನಿಟೈಜರ್ ಬಳಸುವುದು ಮುಂತಾದ ಕೋವಿಡ್ ನಿಯಮಗಳನ್ನು ಪರಿಪಾಲಿಸುವುದು ಅವಶ್ಯಕವಾಗಿದೆ ಎಂದು ಅವರು ತಮ್ಮ ಅಭಿಪ್ರಾಯ ತಿಳಿಸಿದರು.
ವರದಿ: ಸಿ.ಎಚ್. ಬಾಳನಗೌಡ್ರ