ಔಷಧಗಳ ಆಗರ ವೀಳ್ಯದೆಲೆ

ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಆಂಜನೇಯನಿಗೂ ವೀಳ್ಯದೆಲೆಯ ಹಾರವನ್ನು ಅರ್ಪಿಸಲಾಗುತ್ತದೆ. ಎಲ್ಲಾ ಶುಭ ಸಮಾರಂಭಗಳಲ್ಲಿ ವೀಳ್ಯದೆಲೆಗೆ ಬಹಳ ಮಹತ್ವ ಇದೆ. ಕರಾವಳಿ ಭಾಗದಲ್ಲಿ ವೀಳ್ಯ ನೀಡಿ ಶುಭ ಸಮಾರಂಭಗಳಿಗೆ ಆಹ್ವಾನ ನೀಡುವ ಪದ್ಧತಿಯೂ ಇದೆ. ಸಾಂಪ್ರದಾಯಿಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು.

  • ಕೆಮ್ಮು ಹಾಗೂ ಕಫದ ಸಮಸ್ಯೆಗೆ 1 ವೀಳ್ಯದೆಲೆಯಲ್ಲಿ ಒಂದೆರಡು ಹರಳು ಉಪ್ಪು ಹಾಗೂ ಒಂದೆರಡು ಕರಿಮೆಣಸನ್ನು ಸೇರಿಸಿ ಸೇವಿಸಬೇಕು.
  • ವೀಳ್ಯದೆಲೆಯನ್ನು ಕಿವಿಗಳ ಮೇಲೆ ಕಟ್ಟಿದರೆ ಗ್ಯಾಸ್ಟ್ರಿಕ್‌ನಿಂದ ಉಂಟಾಗುವ ತಲೆನೋವು ಗುಣವಾಗುತ್ತದೆ.
  • ಒಂದೆರಡು ವೀಳ್ಯದೆಲೆಯನ್ನು ದಿನಕ್ಕೆ ಎರಡು -ಮೂರು ಬಾರಿ ಜಗಿದರೆ ಕಫಯುಕ್ತ ಕೆಮ್ಮು ಕಡಿಮೆಯಾಗುತ್ತದೆ.
  • ವೀಳ್ಯದೆಲೆ ರಸಕ್ಕೆ, ತುಳಸಿ ಎಲೆಯ ರಸ, 1 ಚಮಚ ಜೇನುತುಪ್ಪ ಸೇರಿಸಿ ಸೇವಿಸಿದರೆ ನೆಗಡಿ ವಾಸಿ.
  • ವೀಳ್ಯದೆಲೆ ಬೇರನ್ನು ಜಗಿದರೆ ಸ್ವರವು ಮೃದುವಾಗುತ್ತದೆ.
  • 3 ಚಮಚ ವೀಳ್ಯದೆಲೆಯ ರಸವನ್ನು 1 ಚಮಚ ಜೇನು ತುಪ್ಪದ ಜತೆ ಸೇವಿಸಿದರೆ ಒಣ ಕೆಮ್ಮು ಕಮ್ಮಿಯಾಗುತ್ತದೆ.
  • ಗಾಯಕ್ಕೆ ವೀಳ್ಯದೆಲೆಯ ರಸದ ಜೊತೆಗೆ ನಿಂಬೆಹಣ್ಣನ್ನು ಬೆರೆಸಿ ಹಚ್ಚಿದರೆ ಗಾಯ ಬೇಗ ಗುಣವಾಗುತ್ತದೆ.

Related Articles

ಪ್ರತಿಕ್ರಿಯೆ ನೀಡಿ

Latest Articles