ಬೆಂಗಳೂರು ಕರಗ ರದ್ದು

ಬೆಂಗಳೂರು: ಎಲ್ಲವೂ ಅಂದುಕೊ0ಡ0ತೆ ಇರುತ್ತಿದ್ದಿದ್ದರೆ ಇಷ್ಟೊತ್ತಿಗೆ ಧರ್ಮರಾಯ ಸ್ವಾಮಿ ದೇಗುಲದಲ್ಲಿ ಕರಗ ಉತ್ಸವದ ಸಂಭ್ರಮ ಮನೆ ಮಾಡಿರುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಶತಮಾನಗಳ ಇತಿಹಾಸ ಹೊಂದಿರುವ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ದ್ರೌಪದಿ ಕರಗ ಶಕ್ತೊö್ಯÃತ್ಸವ ಕಾರ್ಯಕ್ರಮ ರದ್ದುಗೊಂಡಿದೆ.
ಕೋವಿಡ್ ೧೯ ಪ್ರಕರಣ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಕರಗ ಮಹೋತ್ಸವವನ್ನು ರದ್ದು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಹೇರಲಾಗಿದ್ದು, ಧಾರ್ಮಿಕ ಆಚರಣೆಗಳಿಗೆ ಏಪ್ರಿಲ್ 16 ರಿಂದಲೇ ಸರಕಾರ ನಿಷೇಧ ಹೇರಿರುವುದರಿಂದ ಕರಗ ನಡೆಯುವುದಿಲ್ಲ, ಸಾರ್ವಜನಿಕರು, ಭಕ್ತರು ಸಹಕರಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕರಗ ಆಚರಣೆಯ ಮೂಲ:
ಕುರುಕ್ಷೇತ್ರ ಸಮರದ ನಂತರ ಪಾಂಡವರು ಸ್ವರ್ಗಾರೋಹಣ ಮಾಡುವ ಸಂದರ್ಭದಲ್ಲಿ ದ್ರೌಪದಿ ಮೂರ್ಛೆಗೊಂಡು ಬಿದ್ದಳಂತೆ. ದ್ರೌಪದಿ ಬಿದ್ದದ್ದು ಪಾಂಡವರಿಗೆ ತಿಳಿಯದೆ ಮುಂದೆ ನಡೆಯುತ್ತಾರೆ. ಆಕೆಗೆ ಎಚ್ಚರ ಬಂದು ನೋಡಿದಾಗ ತಿಮಿರಾಸುರ ಎಂಬ ರಾಕ್ಷಸ ದೂರದಲ್ಲಿ ನಿಂತಿದ್ದ. ಆಗ ದ್ರೌಪದಿ ಆದಿಶಕ್ತಿಯ ರೂಪವನ್ನು ತೋರುತ್ತಾ ತಿಮಿರಾಸುರನನ್ನು ಸದೆ ಬಡಿಯಲು, ತನ್ನ ತಲೆಯಿಂದ ‘ಯಜಮಾನ’ರನ್ನು, ಹಣೆಯಿಂದ ‘ಗಣಾಚಾರಿ’ಗಳನ್ನು, ಕಿವಿಗಳಿಂದ ‘ಗವ್ಡ’ರನ್ನು, ಬಾಯಿಯಿಂದ ‘ಗಂಟೆಪೂಜಾರಿ’ಗಳನ್ನು ಮತ್ತು ಹೆಗಲಿನಿಂದ ‘ವೀರಕುಮಾರ’ರನ್ನು ಸೃಷ್ಥಿ ಮಾಡುತ್ತಾಳೆ. ಹೀಗೆ ಹುಟ್ಟಿದ ಇವರೆಲ್ಲರೂ ಸೇರಿ ಆ ರಕ್ಕಸನ ಎದಿರು ಹೋರಾಡಿ ಗೆಲ್ಲುತ್ತಾರೆ. ಹೀಗೆ ಮಕ್ಕಳನ್ನು ಹುಟ್ಟಿಸಿದ ದ್ರೌಪದಿ ಆದಿಶಕ್ತಿಯಾಗಿ, ಮತ್ತೆ ಭೂಮಿಗೆ ಮರಳಿ ಬಾರದಂತೆ ಕೈಲಾಸಕ್ಕೆ ಹೋಗುವುದು ಮಕ್ಕಳಿಗೆ ದುಗುಡ ಉಂಟು ಮಾಡುತ್ತದೆ. ಅವಳು ಹೋಗದಂತೆ ಬೇಡಿಕೊಳ್ಳಲು ಕೃಷ್ಣನು ಅವರಿಗೆ, ತಾಯಿಯನ್ನು ಹೋಗದಂತೆ ತಡೆಯಲು ತಮ್ಮ ಕೈಯಲ್ಲಿರುವ ಕತ್ತಿಯಿಂದ ತಮ್ಮ ಎದೆಗೆ ತಿವಿದುಕೊಳ್ಳುತ್ತಾ (ಇದನ್ನು ಕರಗ ಹಬ್ಬದಲ್ಲಿ ‘ಅಲಗುಸೇವೆ’ ಎನ್ನುತ್ತಾರೆ) “ನಮಗೆ ನೀನಲ್ಲದೆ ಇನ್ಯಾರು ದಿಕ್ಕು, ಹೋಗದಿರು” ಎಂದು ಅಲವತ್ತು ಕೊಳ್ಳಲು ಹೇಳುವನು.

ಇದನ್ನು ನೋಡಿ ದ್ರೌಪದಿಗೆ ಮರುಕವಾಗಿ ಪ್ರತಿ ವರುಷವೂ ಮೂರು ದಿನ ಭೂಮಿಗೆ ಬಂದು ಮಕ್ಕಳೊಂದಿಗೆ ಇರುವ ಮಾತು ನೀಡುತ್ತಾಳೆ. ಆ ಮೂರು ದಿನಗಳೇ ಕರಗ ಹಬ್ಬದ ದಿನಗಳು. ಇದರ ನೆನಪಿಗೆ ಕರಗ ನಡೆಯುತ್ತದೆಂದು ಹೇಳಲಾಗುತ್ತದೆ.

ಇದರ ಜೊತೆಗೆ ಇನ್ನೊಂದು ಐತಿಹ್ಯವಿದೆ. ದ್ವಾಪರ ಯುಗದಲ್ಲಿ, ಒಂದು ಸರ್ವಾಲಂಕಾರ ಭೂಷಿತೆಯಾದ ದ್ರೌಪದಿ ಮಂಗಳ ಕಲಶವನ್ನು ಹಿಡಿದು ಸ್ವಯಂವರ ಮಂಟಪವನ್ನು ಪ್ರವೇಶಿಸಿದಳು. ಮತ್ಸ್ಯವನ್ನು ಬೇಧಿಸುವ ಅರ್ಜುನನ್ನೂ, ಕುಂತಿಯ ಅಭಿಲಾಷೆಯಂತೆ ಉಳಿದ ನಾಲ್ವರು ಪಾಂಡವ ಸಹೋದರರನ್ನೂ ಶಾಸ್ತ್ರೋಸ್ತವಾಗಿ ವಿವಾಹವಾದಳು. ಆಗ ಸಂತೋಷದಿಂದ ಕೈಯಲಿದ್ದ ಕಲಶವನ್ನು ಶಿರದಲ್ಲಿ ಧರಿಸಿದಳು. ಅದೇ ಕರಗವಾಯಿತು ಎಂಬ ನಂಬಿಕೆಯೂ ಇದೆ.

ಹೀಗೆ, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಬೆಂಗಳೂರು ಕರಗ ಇಲ್ಲದೇ ಇರುವುದು ಭಕ್ತರಲ್ಲಿ ನಿರಾಸೆ ಉಂಟು ಮಾಡಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles