ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಮಠದಲ್ಲಿ ಆಟೋ ಚಾಲಕರಿಗೆ ಆಹಾರ ಕಿಟ್ ವಿತರಿಸಿದರು.
ನಂತರ ಮಾತನಾಡಿದ ಶ್ರೀಗಳು, ರಾಜ್ಯಾದ್ಯಂತ ಮಹಾಮಾರಿ ಕೊರೋನ ಎರಡನೆಯ ಅಲೆಯ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ covid-19 ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಲಾಕ್ ಡೌನಾ ಜಾರಿ ಮಾಡಿರುವ ಸಂದರ್ಭದಲ್ಲಿ ಹಲವಾರು ಜನ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಸಣ್ಣ ಪುಟ್ಟ ವ್ಯಾಪಾರಿಗಳು ಆಟೋ ಚಾಲಕರು ದುಡಿಮೆಯಿಲ್ಲದೆ ಹಾಗೂ ಬಡವರು ಹಸಿವಿನಿಂದ ನರಳಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಡವರು, ಸಣ್ಣ ಪುಟ್ಟ ವ್ಯಾಪಾರಿಗಳು ಸಂಕಷ್ಟದಲ್ಲಿರುವ ನೋವಿನ ಸಂಗತಿ ನಮ್ಮೆಲ್ಲರಿಗೂ ಗೊತ್ತಿರುವ ವಿಷಯ. ಹೀಗಾಗಿ ಅವರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡುವುದು ನಮ್ಮ ಧರ್ಮ. ಸಹಾಯ ಮಾಡುವ ಮುಖಾಂತರ ಅವರನ್ನು ಇನ್ನಷ್ಟು ಬಲಪಡಿಸುವ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.