ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ 14 ಕಡೆಗಳಲ್ಲಿ 2 ಸಾವಿರ ಗಿಡಗಳನ್ನು ನೆಡುವ ಮೂಲಕ ವನಸಂವರ್ಧನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜುಲೈ 13 ರಂದು ಚಾಲನೆ ನೀಡಲಾಗುತ್ತದೆ ಎಂದಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ರಾಮ್ ಸುಳ್ಳಿ ಮಾಹಿತಿ ನೀಡಿದರು.
ಜುಲೈ 10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು.
ಶ್ರೀದೇವಳದ ಪ್ರವೇಶದ್ವಾರದಿಂದ ಕುಮಾರಾಧಾರ ವರೆಗೆ, ಮತ್ತು ಕಾಶಿಕಟ್ಟೆಯಿಂದ ಆದಿ ಸುಬ್ರಹ್ಮಣ್ಯದವರೆಗೆ ಮಾಸ್ಟರ್‌ಪ್ಲಾನ್ ಯೋಜನೆಯ ರಸ್ತೆ ಅಗಲೀಕರಣ ಮತ್ತು ಕಾಂಕ್ರಿಟೀಕರಣ ನಡೆದ ರಸ್ತೆಯ ಇಕ್ಕೆಲಗಳಲ್ಲಿ ಶ್ರೀ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ ಸಂಬ0ಧವಾಗಿ ಪ್ರಸ್ತಾಪಿಸಿ ರಸ್ತೆಗಳ 14 ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ವಿವಿಧ ಸಸ್ಯಗಳನ್ನು ನೆಡಲಾಗುವುದು. ಸೇವಾ ಭಾರತಿ ಸುಳ್ಯ, ಕರ್ನಾಟಕ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಹಾಗೂ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ದಕ್ಷಿಣಕನ್ನಡ ಜಿಲ್ಲಾ ಸಂಸದ ನಳಿನ್‌ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಶಾಸಕರು,ಜಿಲ್ಲಾಧಿಕಾರಿಗಳು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ನೇರಳೆ, ಪನ್ನೇರಳೆ, ಕೆಂಡಸ0ಪಿಗೆ, ರೆಂಜ, ಬಿಲ್ವಪತ್ರೆ, ಸೀತಾಅಶೋಕ, ಪಾರಿಜಾತ, ಪೇರಳೆ, ಅರ್ತಿ, ಶ್ರೀಗಂಧ, ಬಾದಾಮಿ ಇತ್ಯಾದಿ ಜಾತಿಯ ವಿವಿಧ 2000 ಕ್ಕೂ ಹೆಚ್ಚಿನ ಸಸಿಗಳನ್ನು ನೆಡಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.