ಶ್ರೀರಂಗಪಟ್ಟಣ: ಕೋವಿಡ್ ಮೂರನೇ ಅಲೆ ಹರಡುವ ಸಂಭವ ಇರುವುದರಿಂದ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಾಲಯ ಮತ್ತು ಸಮೀಪದ ಗಂಜಾಂ ನಿಮಿಷಾಂಬಾ ದೇವಾಲಯಗಳಿಗೆ ವಾರದಲ್ಲಿ ಮೂರು ದಿನ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಶ್ರೀರಂಗನಾಥಸ್ವಾಮಿ ದೇವಾಲ ಯಕ್ಕೆ ಬುಧವಾರ, ಶನಿವಾರ, ಭಾನು ವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಭಕ್ತರ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಗಂಜಾಂ ನಿಮಿಷಾಂಬಾ ದೇವಾಲಯಕ್ಕೆ ಮಂಗಳವಾರ, ಶುಕ್ರವಾರ, ಭಾನುವಾರ, ಸಾರ್ವಜನಿಕ ರಜಾ ದಿನಗಳು ಮತ್ತು ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ಭಕ್ತರ ಪ್ರವೇಶ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ ಶುಕ್ರವಾರ ಹೊರ ಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. ಎರಡೂ ದೇವಾಲಗಳಲ್ಲಿ ಮುಂದಿನ ಆದೇಶದ ವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆದರೆ, ದೇವಾಲಯದ ಒಳಗೆ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳು ವಾಡಿಕೆಯಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.