ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಗಸ್ಟ್4 ರಿಂದ ಸೇವೆಗಳು ಸ್ಥಗಿತ

ಕುಕ್ಕೆಸುಬ್ರಹ್ಮಣ್ಯ: ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 4 ರಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ನೆರೆಯ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಕಾರಣದಿಂದ ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಸೇವೆಗಳನ್ನು ಸ್ಥಗಿತ ಮಾಡಲು ಸೂಚನೆ ನೀಡಲಾಗಿದೆ. ಕರ್ನಾಟಕ – ಕೇರಳ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್‌ ನಡೆಸಿ ತಪಾಸಣೆ ಮಾಡಲಾಗುತ್ತಿದೆ. ಪ್ರಾರಂಭಿಕ ಹಂತದಲ್ಲಿ ಕಠಿಣ ನಿಯಮ ಜಾರಿಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಬಿಗಡಾಯಿಸಬಹುದು. ಸಾರ್ವಜನಿಕರಿಂದ ಈ ಬಗ್ಗೆ ಹೆಚ್ಚಿನ ಸಹಕಾರ ಅಗತ್ಯವಾಗಿದ್ದು, ಕೋವಿಡ್‌ ಮಾರ್ಗಸೂಚಿ ಪಾಲಿಸಿಕೊಂಡು ವ್ಯವಹರಿಸಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles