ಬೆಂಗಳೂರು ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಶನಿವಾರ ಭೇಟಿ ನೀಡಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಚಿವರುಗಳಾದ ಡಾ ಸಿ ಎನ್ ಅಶ್ವತ್ಥ ನಾರಾಯಣ, ಡಾ. ಕೆ ಸುಧಾಕರ್, ಆರ್ ಅಶೋಕ್ , ಕೆ ಗೋಪಾಲಯ್ಯ, ಎಸ್ ಟಿ ಸೋಮಶೇಖರ್ , ಶ್ರೀ ನಾರಾಯಣ ಗೌಡ ಮೊದಲಾದವರು ಉಪಸ್ಥಿತರಿದ್ದರು.