ಆದಿಚುಂಚನಗಿರಿ: ದೇವಾಲಯ ದರ್ಶನಕ್ಕೆ ಮಾತ್ರ ಅವಕಾಶ

ನಾಗಮಂಗಲ: ಕೋವಿಡ್ ಸೋಂಕಿನ ಮೂರನೇ ಅಲೆಯ ಬರುವ ಭೀತಿಯಿದ್ದು, ಸೋಂಕಿನ‌ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಮುಂದಿನ ಆದೇಶದ ವರೆಗೆ ದೇವಾಲಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಪ್ರಕಟಣೆ ತಿಳಿಸಿದ್ದಾರೆ.
ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಎರಡನೇ ಅಲೆಯ ನಂತರ ಹರಿಸೇವೆ, ಭುಕ್ತಿ ಸೇವೆ, ಮುಡಿ ಸೇವೆ, ಪ್ರಸಾದ, ಅನ್ನಸಂತರ್ಪಣೆ ಸೇರಿದಂತೆ ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿತ್ತು.ಆದರೆ ಮೂರನೇ ಅಲೆಯ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಆದೇಶದಂತೆ ಎಲ್ಲಾ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ದೇವಾಲಯಗಳ ದರ್ಶನವನ್ನು ಸಹ ನಿರ್ಬಂಧಿಸಲಾಗಿದೆ. ಭಕ್ತರು, ಯಾತ್ರಿಕರು, ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles