ಶ್ರೀ ರಂಭಾಪುರಿ ಜಗದ್ಗುರುಗಳ ಶ್ರಾವಣ ತಪೋನುಷ್ಠಾನ

ರಂಭಾಪುರಿ ಪೀಠ (ಬಾಳೆಹೊನ್ನೂರು) :
ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಶ್ರೀ ರಂಭಾಪುರಿ ಪೀಠದಲ್ಲಿ ಆಗಸ್ಟ್ 10ರಂದು ಶ್ರಾವಣ ತಪೋನುಷ್ಠಾನ ಕೈಗೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಟೋಕಿಯೋ ಒಲಿಂಪಿಕ್ಸ್ನಲ್ಲಿ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತದ ಕ್ರೀಡಾ ಪಟುಗಳು ಉತ್ಕೃಷ್ಟ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಹರ್ಷ ವ್ಯಕ್ತ ಪಡಿಸಿದರು.


ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷರ ಭೇಟಿ


ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ ಹುಸೇನ ಎಫ್. ಪಠಾಣ ಅವರು ಶ್ರೀ ರಂಭಾಪುರಿ ಪೀಠಕ್ಕೆ ಭೇಟಿಯಿತ್ತು ದೈವ ದರ್ಶನ ಮಾಡಿ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಆಶೀರ್ವಾದ ಪಡೆದರು. ರಾಜ್ಯದ ಉದ್ದಗಲಕ್ಕೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅತ್ಯುತ್ತಮ ಸಾಧನೆ ಮಾಡಿರುವುದನ್ನು ಶ್ರೀಯುತರು ಜಗದ್ಗುರುಗಳಲ್ಲಿ ನಿವೇದಿಸಿಕೊಂಡರು. ಈ ಸಂದರ್ಭದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಬೆಳಗಾವಿ ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ ಹಾಗೂ ಇತರ ಗಣ್ಯರು ಇದ್ದರು.


ವರದಿ: ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ,
ಬಾಳೆಹೊನ್ನೂರು

Related Articles

ಪ್ರತಿಕ್ರಿಯೆ ನೀಡಿ

Latest Articles