ಉಡುಪಿ ಶ್ರೀಕೃಷ್ಣಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಮತ್ತು ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಅವರನ್ನು ಗೌರವಿಸಿ, ಶ್ರೀಪಾದದ್ವಯರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಸಮಾಜಕಲ್ಯಾಣ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ,ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿ  ಪ್ರಾಧಿಕಾರದ ಅಧ್ಯಕ್ಷರಾದ  ಮಟ್ಟಾರ್ ರತ್ನಾಕರ ಹೆಗ್ಡೆ,ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಸುರೇಶ ನಾಯಕ್,  ಮೊದಲಾದವರು ಉಪಸ್ಥಿತರಿದ್ದರು.

ಪರ್ಯಾಯ ಅದಮಾರು ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ರಾಜಾಂಗಣದ ಶ್ರೀನರಹರಿತೀರ್ಥವೇದಿಕೆಯಲ್ಲಿ ಗೌರವಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿದರು.  
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಮತ್ತು ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಶ್ರೀಪಾದದ್ವಯರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

(ಚಿತ್ರ: ಪರಶುರಾಮ ಭಟ್)

Related Articles

ಪ್ರತಿಕ್ರಿಯೆ ನೀಡಿ

Latest Articles