ರಾಯರ ಸನ್ನಿಧಿಯಲ್ಲಿ ಶ್ರೀ ಗಣೇಶನ ಪೂಜೆ

ಬೆಂಗಳೂರಿನ ಜಯನಗರದ 5 ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ ಶ್ರೀ108 ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ  ಆರ್.ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗಣೇಶ ಚತುರ್ಥಿಯ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಈ ದಿನದಂದು ಶ್ರೀ ರಾಯರ ಸನ್ನಿಧಿಯ ಪ್ರಾಕಾರದಲ್ಲಿ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಶ್ರೀ ವರಸಿದ್ಧಿ ವಿನಾಯಕನ ಗಣೇಶನ ಪೂಜೆಯಲ್ಲಿ ಭಾಗವಹಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು ಎಂದು ಪುರೋಹಿತರಾದ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles