ಶ್ರೀರಾಯರ ಮಠದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ

ಬೆಂಗಳೂರು: ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಯರ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ .ಕೆ . ವಾದೀಂದ್ರಾಚಾರ್ಯರ ನೇತೃತ್ವದಲ್ಲಿ”ಪೌರ್ಣಿಮೆ”ಯ ಪ್ರಯುಕ್ತ ಭಕ್ತರ ಸಮ್ಮುಖದಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣ ವ್ರತ ಪೂಜೆ ಆಚರಿಸಲಾಯಿತು.

ಶ್ರೀರಾಘವೇಂದ್ರ ಸ್ವಾಮಿಗಳವರ ಬೃಂದಾವನಕ್ಕೆ ವಿಶೇಷ ಅಭಿಷೇಕ ಅಲಂಕಾರ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

Related Articles

ಪ್ರತಿಕ್ರಿಯೆ ನೀಡಿ

Latest Articles