ವರುಷಕ್ಕೊಮ್ಮೆ ಮಾತ್ರ ತೆರೆಯುವ ದೇಗುಲದ ಗರ್ಭಗುಡಿ, ಇಂದಿನಿಂದ ಐತಿಹಾಸಿಕ ಹಾಸನಾಂಬೆಯ ದರ್ಶನಕ್ಕೆ ಭಕ್ತರಿಗೆ ಅವಕಾಶ

ಹಾಸನ: ಪ್ರಸಿದ್ಧ ಹಾಸನಾಂಬೆ ಹಾಗೂ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅ.28 ರಿಂದ ನವೆಂಬರ್ 6ರವರೆಗೆ ನಡೆಯಲಿದೆ, ಕೊರೊನಾ ಹಿನ್ನೆಲೆಯಲ್ಲಿ ಜಾತ್ರೆ ಸರಳವಾಗಿ ನಡೆಯಲಿದ್ದು, ಅಕ್ಟೋಬರ್ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಮೊದಲನೇ ದಿನ ಹಾಗೂ ಕೊನೆಯ ದಿನ ಸಾರ್ವಜನಿಕರಿಗೆ ಅವಕಾಶವಿಲ್ಲ.

ಈ ಬಾರಿ ಹಾಸನಾಂಬೆ ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ಒಂದು ಸಾವಿರ, 300 ವಿಶೇಷ ದರ್ಶನ ಟಿಕೆಟ್ ಮೂಲಕ ಅವಕಾಶ ನೀಡಲಾಗಿದೆ.

ದೇವರ ದರ್ಶನಕ್ಕೆ ಬರುವವರು 2 ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

Related Articles

ಪ್ರತಿಕ್ರಿಯೆ ನೀಡಿ

Latest Articles