ಬೆಂಗಳೂರು: ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಭಾರತೀಯ ಸಂಸ್ಕೃತಿಯ ಪ್ರವಚನ ಹರಿಕಾರ ಡಾ.ಕೆ.ಎಸ್.ನಾರಾಯಣಾಚಾರ್ಯರು ನವೆಂಬರ್ 26 ರಂದು ಪ್ರಾತಃಕಾಲ ಶ್ರೀಹರಿಯ ಚರಣ ಸೇರಿದರು.
ರಾಮಾಯಣಸಹಶ್ರೀ, ಗೀತಾರತ್ನನಿಧಿ, ರಾಮಾಯಣ ಪಾತ್ರ ಪ್ರಪಂಚ, ಅಗಸ್ತ್ಯ, ಶ್ರೀಮಾತೇ ಕುಂತಿ ಕರೆದಾಗ, ಚಾಣಕ್ಯ ನೀತಿ ಸೂತ್ರಗಳು, ಶ್ರೀರಾಮಾವತಾರ ಸಂಪೂರ್ಣವಾದಾಗ, ವನದಲ್ಲಿ ಪಾಂಡವರು, ದಶಾವತಾರ ಇನ್ನು ಹಲವಾರು 70ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿರುವುದಲ್ಲದೇ ವಿವಿಧ ಪತ್ರಿಕೆ ಮತ್ತು ವಾರಪತ್ರಿಕೆಗಳಲ್ಲಿನ ಅಂಕಣ, ಬರಹಗಳು, ಪ್ರವಚನಗಳು ಮತ್ತು ವಿವಿಧ ಮಾಧ್ಯಮಗಳ ಚರ್ಚೆಗಳಲ್ಲಿ ನಮ್ಮ ನಾಡು, ನುಡಿ, ಸಂಸ್ಕೃತಿ, ಸಂಪ್ರದಾಯ ಮತ್ತು ಸಂಸ್ಕಾರಗಳ ಬಗ್ಗೆ ಆಧಿಕಾರಯುತವಾಗಿ ಆರ್ಥಪೂರ್ಣ ವಿಷಯಗಳನ್ನು ಪ್ರತಿಪಾದಿಸುವ ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದರು.