ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಚಿಕ್ಕುಂಬಿ ಗ್ರಾಮದ ಶ್ರೀ ಜಗದ್ಗುರು ಅಜಾತ ನಾಗಲಿಂಗೇಶ್ವರ ಮಠದಲ್ಲಿ ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಡಿಸೆಂಬರ್ 5ರಂದು ಸಂಜೆ 6.45ಕ್ಕೆ ಕಾರ್ತಿಕೋತ್ಸವ ಮುಕ್ತಾಯ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಚಿಕ್ಕಬಳ್ಳಾಪುರದ ನಂದಿಬೆಟ್ಟದ ಸಿದ್ದನ ಗವಿಯ ಶ್ರೋತ್ರೀಯ ಬ್ರಹ್ಮನಿಷ್ಠ ಸ್ವಾಮಿ ಶಿವಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳು, ಅಥಣಿ ತಾಲೂಕಿನ ಅಡಹಾಳಟ್ಟಿಯ ದುರದುಂಡೇಶ್ವರ ಶಾಖಾ ಮಠದ ಶಿವಪಂಚಾಕ್ಷರಿ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು.
ನರಗುಂದ ಪುಣ್ಯಾರಣ್ಯ ಪತ್ರಿವನಮಠದ ಶ್ರೋತ್ರೀಯ ಬ್ರಹ್ಮನಿಷ್ಠ ಸಿದ್ಧವೀರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು, ಧಡೇರಕೊಪ್ಪ (ಹನುಮನಹಳ್ಳಿ) ಶಿವಾನಂದಮಠದ ಶ್ರೋತ್ರೀಯ ಬ್ರಹ್ಮನಿಷ್ಠ ಶ್ರೀ ಶಿವಬಸವ ಮಹಾಸ್ವಾಮಿಗಳು, ಹಾರೋಗೊಪ್ಪದ ಚನ್ನವೃಷಭೇಂದ್ರ ಲೀಲಾ ಮಠದ ಮಾತೋಶ್ರೀ ಶಿವಯೋಗಿನಿದೇವಿ ಅವರು ಆಶೀರ್ವಚನ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಶ್ರೀ ಮಠದ ಬ್ರಹ್ಮರಥ(ತೇರು) ನಿರ್ಮಾಣದ ದೇಣಿಗೆ ಪುಸ್ತಕ ಬಿಡುಗಡೆಯನ್ನು ನಂದಿಮಠದ ಶ್ರೀಗಳು ನೆರವೇರಿಸಲಿರುವರು. ಚಿಕ್ಕುಂಬಿಯ ಸಮಸ್ತ ಭಜನಾ ಮಂಡಳಿಗಳು ಹಾಗೂ ಸಂಗೀತಗಾರರಿಂದ ಸಂಗೀತ ಸೇವೆ ಜರಗುವುದು ಎಂದು ಶ್ರೀ ಮಠ ಪ್ರಕಟಣೆಯಲ್ಲಿ ತಿಳಿಸಿದೆ.
ಮಾಹಿತಿ: ವೈ.ಬಿ.ಕಡಕೋಳ (ಶಿಕ್ಷಕರು)