ಹರಿಹರ: ಕಾಶಿಯಲ್ಲಿರುವ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದ ಹರಕ್ಷೇತ್ರ ಹರಿಹರದಲ್ಲಿ ನಿರ್ಮಿಸಲು ಯೋಜಿಸಿರುವ ತುಂಗಾಭದ್ರಾ ಆರತಿ ಮಂಟಪಗಳ ಉದ್ಘಾಟನಾ ಕಾರ್ಯವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜನವರಿ 14 ರಂದು ನಡೆಸಿಕೊಡಲಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಈ ತುಂಗಭದ್ರಾ ಆರತಿ ಮಂಟಪಗಳ ನೀಲಿ ನಕ್ಷೆಯ ಬಗ್ಗೆ ಹರಕ್ಷೇತ್ರ ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮಿಗಳು ಹಾಗೂ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡರು.
ಇತ್ತೀಚೆಗೆ ಕಾಶಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ತಾವು ಕಾಶಿಯಲ್ಲಿ ನೋಡಿದ ಗಂಗಾ ಆರತಿಯ ಕೆಲ ಅಂಶಗಳನ್ನು ಈ ಯೋಜನೆಯಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂಧರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮಲ್ಲಿಕಾರ್ಜುನ ಬಿ ಗುಂಗೆ ಹಾಗೂ ಇನ್ನಿತರು ಅಧಿಕಾರಿಗಳು ಉಪಸ್ಥಿತರಿದ್ದರು.