ಆದಿಚುಂಚನಗಿರಿ ಮಠದ ಡಾ. ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಿಂದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರಿಗೆ ಅಭಿನಂದನೆ

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾಮಠ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಮಂಗಳೂರು ವಿಶ್ವವಿದ್ಯಾಲಯ ಕ್ಕೆ ಸಲ್ಲಿಸಿದ “ಸಂಸ್ಕೃತ -ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನ” ಎಂಬ ಮಹಾ ಸಂಶೋಧನಾ ಪ್ರಬಂಧಕ್ಕೆ ಪಿಎಚ್ ಡಿ ಪದವಿ ನೀಡಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ಶ್ರೀ ಡಾ ಬಾಲಗಂಗಾಧರನಾಥ ಸ್ವಾಮೀಜಿ ಅವರ 9 ನೇ ಪುಣ್ಯ ಸ್ಮಂಸ್ಮರಣಾ ಮಹೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಆಶೀರ್ವದಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles