ಮಹಾತಪಸ್ವಿ ಲಿಂ. ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳ ಪುಣ್ಯ ಸ್ಮರಣೋತ್ಸವ ಜನವರಿ 22 ರಂದು

ರಂಭಾಪುರಿ ಪೀಠ (ಬಾಳೆಹೊನ್ನೂರು): ತರೀಕೆರೆ ತಾಲೂಕಿನ ಬುಕ್ಕಾಂಬುಧಿ ಕ್ಷೇತ್ರದಲ್ಲಿ ಪರಮ ತಪಸ್ವಿ ಲಿಂ. ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳವರ 85 ನೇ ವರ್ಷದ ಪುಣ್ಯ ಸ್ಮರಣೋತ್ಸವ ಸಮಾರಂಭ ಜನವರಿ 22 ರಂದು ಶನಿವಾರ ಜರುಗಲಿದೆ ಎಂದು ಶ್ರೀಮದ್ಜುಜ್ಜಯಿನಿ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಪ್ರಕಟಪಡಿಸಿದರು.

ಅಂದು ಪ್ರಾತ:ಕಾಲ ಅವರು ತಪಗೈದ ಸ್ಥಾನದಲ್ಲಿ ಪ್ರತಿಷ್ಠಾಪಿಸಿರುವ ಲಿಂ. ಶ್ರೀ ಉಜ್ಜಯನಿ ಸಿದ್ಧಲಿಂಗ ಜಗದ್ಗುರುಗಳವರ ಶಿಲಾ ಮಂಗಲ ಮೂರ್ತಿಗೆ ರುದ್ರಾಭಿಷೇಕ, ಅಷ್ಟೋತ್ತರ ಮತ್ತು ಮಹಾಮಂಗಲ ಜರುಗುವುದು. ನಂತರ ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಪುಣ್ಯ ಸ್ಮರಣೋತ್ಸವ ಸಮಾರಂಭ ಜರುಗಲಿದ್ದು ಹಲವಾರು ಮಠಾಧೀಶರು, ಗಣ್ಯರು ಮತ್ತು ರಾಜಕೀಯ ಧುರೀಣರು ಪಾಲ್ಗೊಳ್ಳಲಿದ್ದಾರೆ. ಪುಣ್ಯಾರಾಧನೆಯ ಅಂಗವಾಗಿ ಜನವರಿ 17 ರಿಂದ 21 ರ ವರೆಗೆ 5 ದಿನಗಳ ಕಾಲ ಶ್ರೀ ಉಜ್ಜಯನಿ ಸಿದ್ಧಲಿಂಗ ಜಗದ್ಗುರುಗಳು ಇಷ್ಟಲಿಂಗ ಪೂಜಾ ನೆರವೇರಿಸುವರು.
ಕೋವಿಡ್ ನಿಬಂಧನೆಗೊಳಪಟ್ಟು ಸಾಂಪ್ರದಾಯಿಕವಾಗಿ ಎಲ್ಲ ಕಾರ್ಯಕ್ರಮಗಳು ಜರುಗುತ್ತವೆ. ಆಗಮಿಸಿದ ಭಕ್ತರು ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಟ್ರಸ್ಟಿನ ಉಪಾಧ್ಯಕ್ಷರಾದ ಎಸ್.ಎಂ. ವೀರಭದ್ರಪ್ಪನವರು ಮತ್ತು ಕಾರ್ಯದರ್ಶಿ ಹೆಚ್.ಪಿ. ಸುರೇಶ ಮತ್ತು ಟ್ರಸ್ಟಿನ ಎಲ್ಲ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.


ವರದಿ: ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ,
ಬಾಳೆಹೊನ್ನೂರು

Related Articles

ಪ್ರತಿಕ್ರಿಯೆ ನೀಡಿ

Latest Articles