ಆದಿಚುಂಚನಗಿರಿಯಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 77ನೇ ಜಯಂತ್ಯುತ್ಸವ

ಆದಿಚುಂಚನಗಿರಿ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಜನವರಿ 18 ರಂದು ಆಯೋಜಿಸಲಾಗಿದ್ದ ಪರಮಪೂಜ್ಯ ಜಗದ್ಗುರು ಯುಗಯೋಗಿ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 77ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಯವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶ್ರೀ ಗುರು ಚರಿತೆ ಪುಸ್ತಕವನ್ನು ಮತ್ತು ಪ್ರಜ್ಞಾನ ವಿಶೇಷ ಸಂಚಿಕೆಯನ್ನು ಪೂಜ್ಯ ಮಹಾ ಸ್ವಾಮೀಜಿಯರು ಬಿಡುಗಡೆ ಮಾಡಿ ಆಶೀರ್ವದಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles