ಮಂಗಳೂರು: ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಮಂಗಳೂರು ವಿವಿಗೆ ಸಲ್ಲಿಸಿದ್ದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿವಿ ಡಾಕ್ಟರೇಟ್ ಪದವಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಶ್ರೀಗಳಿಗೆ ಕಾವೂರು ಬಿಜಿಎಸ್ ಸೇವಾ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಜನವರಿ 31 ರಂದು ಬೆಳಗ್ಗೆ 10.30 ಕ್ಕೆ ಕಾವೂರು ಬಿಜಿಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ವಿವಿ ಕುಲಪತಿ ಡಾ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು. ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಕಾಶ್ ಪಿ.ಎಸ್. ಅಭಿನಂದನಾ ಭಾಷಣ ಮಾಡುವರು. ಶಾಸಕ ಡಾ. ಭರತ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಸುಮಂಗಳಾ ರಾವ್ ಉಪಸ್ಥಿತರಿರುವರು.
ಶ್ರೀಗಳು “ಸಂಸ್ಕೃತ ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನ” ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು.