ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ

ಮೈಸೂರು: ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿ ಗಟ್ಟವಾಡಿಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ದೇವರ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಶ್ರೀ ಮೇರು ಸಹಿತ ಶ್ರೀ ರಾಜರಾಜೇಶ್ವರಿ ಪ್ರತಿಷ್ಠಾಪನಾ ಕಾರ್ಯ ಮೇ 13 ರಂದು ನಡೆಯಲಿದೆ. 15ರಂದು ನಡೆಯುವ ಕಾರ್ಯಕ್ರಮದಲ್ಲಿ ಶ್ರೀ ಸ್ವಾಮಿಯ 18 ಅಡಿ ಎತ್ತರದ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಿದೆ. ಅಂದು ಬೆಳಗ್ಗೆ 8.30ರಿಂದ ಸ್ವಾಮಿಗೆ ಪ್ರಥಮ ಕುಂಭಾಭಿಷೇಕ, ನಂತರ ಶ್ರೀ ಸುಬ್ರಹ್ಮಣ್ಯ ಸಹಸ್ರ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Related Articles

ಪ್ರತಿಕ್ರಿಯೆ ನೀಡಿ

Latest Articles