ಹರಿದಾಸ ಝೇಂಕಾರ

ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ, ಮೇ 12, ಗುರುವಾರ ಸಂಜೆ 7-00 ಗಂಟೆಗೆ : ವಿದ್ವಾನ್ ಶ್ರೀ ಚಿಂತಲಪಲ್ಲಿ ವಿ. ಶ್ರೀನಿವಾಸ್ ಇವರಿಂದ “ಹರಿದಾಸ ಝೇಂಕಾರ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ವಿದ್ವಾನ್ ಶ್ರೀ ಎಂ.ಎಸ್. ಸತ್ಯನಾರಾಯಣ – (ಪಿಟೀಲು), ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).

ಕಾರ್ಯಕ್ರಮ ನಡೆಯುವ ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41

Related Articles

ಪ್ರತಿಕ್ರಿಯೆ ನೀಡಿ

Latest Articles