ಹರಿನಾಮ ಸಂಕೀರ್ತನೆ

ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜನವರಿ 12, ಗುರುವಾರ ಸಂಜೆ 7-30ಕ್ಕೆ, ಶ್ರೀಮತಿ ಚೇತನಾ ಜೋಶಿ ಇವರಿಂದ “ಹರಿನಾಮ ಸಂಕೀರ್ತನೆ” ಗಾಯನ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ಎನ್. ಜಿ. ಪಾಟೀಲ್ (ಹಾರ್ಮೋನಿಯಂ), ಕೇಶವ ಜೋಶಿ (ತಬಲಾ), ರಾಜೇಶ್ ಕುಲಕರ್ಣಿ (ತಾಳ). ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಗುರುರಾಯರ ಕೃಪೆಗೆ ಪಾತ್ರರಾಗಬೇಕೆಂದು ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ

Related Articles

ಪ್ರತಿಕ್ರಿಯೆ ನೀಡಿ

Latest Articles