ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಮಹೋತ್ಸವ 2023

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ  ದ್ವಿತೀಯ ದಿನವಾದ ಅ. 16 ರಂದುಸಿದ್ಧಸಿಂಹಾಸನ  ಪೂಜೆ ಹಾಗೂ ಷೋಡಶೋಪಚಾರ ಪೂಜೆಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ನೆರವೇರಿದವು.


ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸದ್ಭಕ್ತರು  ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles