ಡಿ.23, 24ರಂದು ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ

ಬೆಂಗಳೂರು: ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ, ಕೋಟಿ ಲೇಖನ ಯಜ್ಞ ಸಮಿತಿ ವತಿಯಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷಾ ಸಮಾರಂಭ ಡಿ.23, 24ರಂದು ಬೆಳಗ್ಗೆ 9.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿನಡೆಯಲಿರುವ ಕಾರ್ಯಕ್ರಮದಲ್ಲಿ ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಕಿರಿಯ ಶ್ರೀ ಸುಶೀಂದ್ರ ತೀರ್ಥರು ಸಾನ್ನಿಧ್ಯ ವಹಿಸುವರು. ಈ ಕಾರ್ಯಕ್ರಮದಲ್ಲಿ ಭಗವದ್ಗೀತೆ ಮತ್ತು ವಿಷ್ಣು ಸಹಸ್ರನಾಮ ಪಾರಾಯಣ, ಗೀತಾ ಚಿಂತನ, ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆ ನಡೆಯಲಿವೆ.

Related Articles

ಪ್ರತಿಕ್ರಿಯೆ ನೀಡಿ

Latest Articles