ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ

ಮೈಸೂರು ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಳೆದ ಹಲವಾರು ವರ್ಷಗಳಿಂದ ಅನೂಚಾನವಾಗಿ ನಡೆಸಿಕೊಂಡು ಬರುತ್ತಿರುವಂತೆ ಈ ವರ್ಷವೂ ಸಹ ನೂತನ ಕ್ರೈಸ್ತ ವರ್ಷಾರಂಭದ ಅಂಗವಾಗಿ ಜನವರಿ 1 ರಂದು (ಸೋಮವಾರ)ದಂದು ಬೆಳಗ್ಗೆ 4ಗಂಟೆಯಿಂದ ಪ್ರಾರಂಭಿಸಿ ಶ್ರೀ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಮತ್ತು ಶ್ರೀರಂಗಕ್ಷೇತ್ರ ಮಧುರೈ ಕ್ಷೇತ್ರಗಳಿಂದ ತರಿಸಿದ ವಿಶೇಷ ತೋಮಾಲೆ ಮತ್ತು ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ ಸಹಸ್ರನಾಮರ್ಚನೆ ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷಿö್ಮ ದೇವರಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ಹಾಗೂ ಇಪ್ಪತ್ತು ಕ್ವಿಂಟಾಲ್ ಪುಳಿಯೋಗರೆ ನಿವೇದನೆಮತ್ತು ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾಕಾರ್ಯಕ್ರಮವನ್ನು ಪರಮ ಪೂಜ್ಯ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ಏರ್ಪಡಿಸಲಾಗಿದೆ.

1994ನೇ ಇಸವಿಯಲ್ಲಿ ಅಂದಾಜು ಒಂದು ಸಾವಿರ ಲಡ್ಡು ವಿತರಣೆಯಿಂದ ಪ್ರಾರಂಭಿಸಿ ಕಳೆದ ಹಲವಾರು ವರ್ಷಗಳಿಂದ ಪ್ರತಿ ವರ್ಷ ಒಂದು ಲಕ್ಷ ಮತ್ತು ಎರಡು ಲಕ್ಷ ಲಡ್ಡು ಪ್ರಸಾದವನ್ನು ಭಕ್ತಾದಿಗಳಿಗೆ ವಿತರಣೆ ಮಾಡಲಾಗುತ್ತದೆ. ಈ ವರ್ಷವೂ ಸಹ ಇನ್ನೂ ಹೆಚ್ಚು ಅಂದರೆ ಎರಡು ಲಕ್ಷ ಲಡ್ಡುವನ್ನು ವಿತರಣೆ ಮಾಡಲು ದೇವಸ್ಥಾನ ವತಿಯಿಂದ ತಯಾರಿ ನಡೆಯುತ್ತಿದೆ. ಈ ವರ್ಷ ಅಂದಾಜು ಎರಡು ಕೆಜಿ ತೂಕದ 15000 ಲಡ್ಡುಗಳು ಹಾಗೂ (೧೫೦) ಗ್ರಾಂ ತೂಕದ 2 ಲಕ್ಷ ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಮತ ಮತ್ತು ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು.

Related Articles

ಪ್ರತಿಕ್ರಿಯೆ ನೀಡಿ

Latest Articles