ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ  ಅರ್ಪಿತಾ ನಾಯಕ

– ಮೈಸೂರಿನ ನಾದ ವಿದ್ಯಾಲಯ ಸಂಸ್ಥೆ ಆಯೋಜನೆ

– ಜಗನ್ಮೋಹನ ಅರಮನೆಯಲ್ಲಿ ಫೆ. 17ರ ಸಂಜೆ ಕಾರ್ಯಕ್ರಮ

ಮೈಸೂರು:  ಮೈಸೂರಿನ ನಾದ ವಿದ್ಯಾಲಯ ಅಕಾಡೆಮಿ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ ವಿದುಷಿ ಮಿತ್ರಾ ನವೀನ್ ಅವರ ಶಿಷ್ಯೆ, ಬಿಜಿನೆಸ್ ಅನಾಲಿಸ್ಟ್ ಅರ್ಪಿತಾ ನಾಯಕ ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾಗಿದ್ದಾರೆ.

ಮೈಸೂರಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ  ಫೆ. 17ರ ಸಂಜೆ 5ಕ್ಕೆ ಆಯೋಜನೆಗೊಂಡಿರುವ ರಂಗಪ್ರವೇಶ ಕಾರ್ಯಕ್ರಮಕ್ಕೆ

ಬೆಂಗಳೂರಿನ ನೃತ್ಯಗಂಗಾ ಪ್ರದರ್ಶನ ಕಲಾ ಕೇಂದ್ರದ ನಿರ್ದೇಶಕಿ ವಿದುಷಿ ರೂಪಶ್ರೀ ಮಧುಸೂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, , ಶಾಸಕ ಟಿ.ಎಸ್. ಶ್ರೀವತ್ಸ ಸಾಕ್ಷಿಯಾಗಲಿದ್ದಾರೆ. ವಿದುಷಿ ಮಿತ್ರಾ ನವೀನ್, ಉದಯನಾಯಕ ಮತ್ತು ಸುವರ್ಣಾ ನಾಯಕ ಉಪಸ್ಥಿತರಿರಲಿದ್ದಾರೆ.  

ಹಿಮ್ಮೇಳ: ಕಲಾವಿದೆ ಅರ್ಪಿತಾ ಅವರ ರಂಗಪ್ರವೇಶಕ್ಕೆ ಗುರು ಮಿತ್ರಾ ನವೀನ್ ನಟುವಾಂಗ, ವಿದ್ವಾನ್ ಎಂ. ಎಸ್. ನವೀನ್ ಅಂದಗಾರ್ ಗಾಯನ, ವಿದ್ವಾನ್ ಜಿ.ಎಸ್. ನಾಗರಾಜ್ ಮೃದಂಗ ಮತ್ತು ವಿದ್ವಾನ್ ವಿವೇಕ ಕೃಷ್ಣ ಕೊಳಲು ಪಕ್ಕವಾದ್ಯದಲ್ಲಿ ಸಹಕರಿಸಲಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles