ಬೆಂಗಳೂರು: ‘ಬೆಂಗಳೂರು ಕರಗ ಶಕ್ತ್ಯೋತ್ಸವವು ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 23ರ ಚೈತ್ರ ಪೂರ್ಣಿಮೆಯಂದು ನೆರವೇರಲಿದೆ.
ಬೆಳದಿಂಗಳ ಬೆಳಕಲ್ಲಿಕರಗ ಶಕ್ತ್ಯೋತ್ಸವ ನಡೆಯಲಿದ್ದು, ಅಂದು ಮಧ್ಯರಾತ್ರಿ 12.30ಕ್ಕೆ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಹೊರಡುವ ಹೂವಿನ ಕರಗಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಲಿದ್ದಾರೆ.