ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 6, 7 ಮತ್ತು 9ರಂದು ಪ್ರತಿದಿನ ಸಂಜೆ 6-30 ರಿಂದ 7-30ರ ವರೆಗೆ ಮ||ಶಾ||ಸಂ|| ಶ್ರೀ ಬ್ರಹ್ಮಣ್ಯಾಚಾರ್ಯರಿಂದ “ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ” ವಿಷಯವಾಗಿ ಧಾರ್ಮಿಕ ಪ್ರವಚನ ಹಾಗೂ ಪ್ರತಿದಿನ ಸಂಜೆ 5-30 ರಿಂದ 6-30 ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಏರ್ಪಡಿಸಿದೆ ಎಂದು ಟಿಟಿಡಿ ಹೆಚ್.ಡಿಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಮತ್ತು ಶ್ರೀಮಠದ ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.