ಜಯನಗರ ರಾಯರ ಮಠದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು, ಅನ್ನದಾನ ಸೇವೆ, ಗಾಯನ ಸೇವೆ 

ಬೆಂಗಳೂರು : ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಸೆಪ್ಟೆಂಬರ್ 12, ಗುರುವಾರದ ಪ್ರಯುಕ್ತ ಬೆಳಗ್ಗೆ ಫಲ-ಪಂಚಾಮೃತ ಅಭಿಷೇಕ, ಕನಕಾಭಿಷೇಕ, ಗುರುರಾಯರ ಬೃಂದಾವನಕ್ಕೆ, ಶ್ರೀ ಮುಖ್ಯಪ್ರಾಣದೇವರಿಗೆ ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮ ಗಳು ಜರುಗಿದವು. 

ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ, ತೊಟ್ಟಿಲು ಸೇವೆ, ಮಹಾಮಂಗಳಾರತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಶ್ರೀಮತಿ ಸ್ನೇಹಾ ಗುಡಿ ಮತ್ತು ಅವರ ಶಿಷ್ಯೆ ಕು|| ಗೋಪಿಕಾ  ಗಾಯನ ಸೇವೆ ಸಲ್ಲಿಸಿದರು. ಇವರ ಗಾಯನಕ್ಕೆ ವಾದ್ಯ ಸಹಕಾರದಲ್ಲಿ ಶ್ರೀ ಸರ್ವೋತ್ತಮ ತಬಲಾ ವಾದನದಲ್ಲಿ ಹಾಗೂ ಕು|| ಸೃಷ್ಟಿ ದೇಸಾಯಿ ಹಾರ್ಮೋನಿಯಂ ವಾದನದಲ್ಲಿ ಸಹಕರಿಸಿದರು. ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾದರು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles