ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬನ್ನೂರು ಭಾರತೀನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಅಖಿಲ ಹವ್ಯಕ ಮಹಾಸಭಾದ ಸಭಾಭವನ ಉದ್ಘಾಟನಾ ಸಮಾರಂಭ ಜನವರು 22ರಂದು ಬೆಳಗ್ಗೆ 11.30 ಕ್ಕೆ ನಡೆಯಲಿದೆ.
ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಸಾನ್ನಿಧ್ಯದಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಎಂಪಿ ನಳಿನ್‌ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಶ್ರೀ ರಾಮಚಂದ್ರಾಪುರ ಮಠ ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮೊದಲಾದವರು ಭಾಗವಹಿಸುವರು.