ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜನವರಿ 5ರಂದು ಆದಿಚುಂಚನಗಿರಿ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಭೂಮಿ ಪೂಜೆ ನೆರವೇರಿತು.
ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್, ಸಚಿವರುಗಳಾದ ಆರ್ ಅಶೋಕ್, ಡಾ. ಕೆ ಸಿ ನಾರಾಯಣಗೌಡ, ಆರಗ ಜ್ಞಾನೇಂದ್ರ , ಶಾಸಕ ಸುರೇಶ್ ಗೌಡ, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.