ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಯುಗಮಾನೋತ್ಸವ ಮಾರ್ಚ್ 16 ರಂದು

ರಂಭಾಪುರಿ ಪೀಠ (ಬಾಳೆಹೊನ್ನೂರು): ಬಾಳೆಹೊನ್ನೂರಿನ ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಮಾರ್ಚ್14೪ರಿಂದ 18ರ ವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಶ್ರೀ ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ಜರುಗಲಿವೆ ಎಂದು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದರು.

ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು.


ದಿನಾಂಕ ೧೪ರಂದು ಧ್ವಜಾರೋಹಣ-ಹರಿದ್ರಾ ಲೇಪನ ನಡೆಯುವುದು. 15ರಂದು ಶ್ರೀ ಜಗದ್ಗುರು ಶಿವಾನಂದ ಎಸ್ಟೇಟಿನಲ್ಲಿ ನೂತನವಾಗಿ ನಿರ್ಮಿಸಿದ ಶಕ್ತಿಮಾತೆ ಶ್ರೀ ಚೌಡೇಶ್ವರಿ ದೇವಾಲಯ ಉದ್ಘಾಟನೆ-ಪ್ರಾಣ ಪ್ರತಿಷ್ಠಾಪನೆ ಜರುಗುವುದು. ಸಂಜೆ 6.30 ಕ್ಕೆ ಶ್ರೀ ವೀರಭದ್ರಸ್ವಾಮಿ ವಿಜಯೋತ್ಸವ ಸಮಾರಂಭ ನಡೆಯಲಿದ್ದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಆರಗ ಜ್ಞಾನೇಂದ್ರ, ಬಿ.ಸಿ.ನಾಗೇಶ, ಶಾಸಕರಾದ ಕೆ.ಎಸ್.ಲಿಂಗೇಶ್, ಬೆಳ್ಳಿ ಪ್ರಕಾಶ್, ಡಿ.ವಿ.ಸುರೇಶ್, ಅಮೃತ ದೇಸಾಯಿ, ಅರುಣಕುಮಾರ ಪೂಜಾರ, ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ, ದೂಡಾ ಅಧ್ಯಕ್ಷ ಶಿವಕುಮಾರ ದೇವರಮನೆ ಮತ್ತು ಗೊಡಚಿ ಶ್ರೀ ವೀರಭದ್ರೇಶ್ವರ ಕ್ಷೇತ್ರದ ಧರ್ಮದರ್ಶಿಗಳು ಆಡಳಿತಾಧಿಕಾರಿಗಳು ಭಾಗವಹಿಸುವರು.

ಸುಳ್ಳದ ಶಿವಸಿದ್ಧರಾಮೇಶ್ವರ ಶ್ರೀಗಳು, ತೋರಗಲ್ಲ ಕಿಲ್ಲೇ ಬೃಹನ್ಮಠದ ಚನ್ನಮಲ್ಲ ಶ್ರೀಗಳು, ಹುಕ್ಕೇರಿ ಚಂದ್ರಶೇಖರ ಶ್ರೀಗಳು, ಬೇಬಿಮಠದ ಡಾ. ತ್ರಿನೇತ್ರ ಮಹಾಂತ ಸ್ವಾಮಿಗಳು, ಎಂ.ಚOದರಗಿ-ಕಟಕೋಳದ ವೀರಭದ್ರ ಶ್ರೀಗಳು, ಆಲಮೇಲದ ಚಂದ್ರಶೇಖರ ಶ್ರೀಗಳು, ಭಾಗೋಜಿಕೊಪ್ಪದ ಶಿವಲಿಂಗ ಮುರುಘೇಂದ್ರ ಶ್ರೀಗಳು, ಬೇರುಗಂಡಿಯ ರೇಣುಕ ಮಹಂತ ಶ್ರೀಗಳು, ಸಿಂಧನೂರು-ಕನ್ನೂರಿನ ಸೋಮನಾಥ ಶ್ರೀಗಳು ಪಾಲ್ಗೊಳ್ಳುವರು. ಎಮ್ಮಿಗನೂರು ಹಂಪಿ ಸಾವಿರದೇವರ ಮಠದ ವಾಮದೇವ ಮಹಾಂತ ಶ್ರೀಗಳು ಹಾಗೂ ರಾಣೆಬೆನ್ನೂರಿನ ಶಿವಯೋಗಿ ಶ್ರೀಗಳು ವೀರಭದ್ರಸ್ವಾಮಿಯ ಕುರಿತಾಗಿ ವಿಶೇಷ ಉಪನ್ಯಾಸ ನೀಡುವರು.


16ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಜರುಗಲಿದ್ದು ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಯನ್ನು ತುಮಕೂರಿನ ಸಂಸದ ಜಿ.ಎಸ್.ಬಸವರಾಜು ಅವರಿಗೆ ಪ್ರದಾನ ಮಾಡಲಾಗುವುದು.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇವರು ಉದ್ಘಾಟಿಸುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಚಿವರಾದ ಸಿ.ಸಿ.ಪಾಟೀಲ, ಬಿ.ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಶಾಸಕ ಸಿ.ಟಿ.ರವಿ, ಶಾಸಕರಾದ ಟಿ.ಡಿ.ರಾಜೇಗೌಡರು, ಕಳಕಪ್ಪ ಬಂಡಿ, ಮಾಡಾಳು ವಿರೂಪಾಕ್ಷಪ್ಪನವರು, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಶ್ರೀ ಪ್ರಭುಲಿಂಗೇಶ್ವರ ಶುಗರ್ಸನ ಜಗದೀಶ ಗುಡಗುಂಟಿಮಠ ಭಾಗವಹಿಸುವರು.

ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶ್ರೀಗಳು, ಸೂಡಿ ಡಾ. ಕೊಟ್ಟೂರ ಬಸವೇಶ್ವರ ಶ್ರೀಗಳು, ಅಮ್ಮಿನಭಾವಿಯ ಅಭಿನವ ಶಾಂತಲಿ0ಗ ಶ್ರೀಗಳು, ಸಿದ್ಧರಬೆಟ್ಟದ ವೀರಭದ್ರ ಶ್ರೀಗಳು ಸೇರಿದಂತೆ ಶ್ರೀನಿವಾಸ ಸರಡಗಿ, ಬಬಲಾದ-ದೇವಾಪುರ, ಮಹಾರಾಷ್ಟçದ ನೂಲ ಶ್ರೀಗಳು ಪಾಲ್ಗೊಳ್ಳುವರು. ರಾತ್ರಿ 8.30ಗಂಟೆಗೆ ಗಾನಗಂಧರ್ವ ಶ್ರೀ ಗುರುಸ್ವಾಮಿ ಕಲಕೇರಿ, ಗದಗ ಇವರಿಂದ ಭಕ್ತಿಗೀತೆಗಳ ಗಾನ ತರಂಗ ಜರುಗುವುದು. ರಾತ್ರಿ 10.30 ಗಂಟೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಕೃಪಾ ಪೋಷಿತ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಶೃಂಗೇರಿ ಕ್ಷೇತ್ರ ಮಟ್ಟದ ಹೊನಲು ಬೆಳಕಿನ ಪ್ರೊ ಮಾದರಿ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು ವಿಜೇತರಿಗೆ ‘ಶ್ರೀ ಜಗದ್ಗುರು ರೇಣುಕಾಚಾರ್ಯ ಕಪ್’ ನೀಡಲಾಗುವುದು.
17 ರಂದು ಬೆಳಗ್ಗೆ 11 ಗಂಟೆಗೆ ಚಿಕ್ಕಮಗಳೂರು ಜಿಲ್ಲಾ ಮಹಿಳಾ ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಭಾರತ ಸರ್ಕಾರದ ರಾಜ್ಯ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಕು. ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಬಿ.ಶಿವಕುಮಾರ ‘ಸಂಕಲ್ಪ ಸಿದ್ಧಿ’ ಕೃತಿಯನ್ನು ಕ.ಸಾ.ಪ. ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಷಿ ‘ ಭದ್ರ ತರಂಗ’ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡುವರು.

ಪುಸ್ತಕ ಮಳಿಗೆಯನ್ನು ಶಾಸಕ ಟಿ.ಡಿ. ರಾಜೇಗೌಡ ಉದ್ಘಾಟಿಸುವರು. ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಕೃತಿ ಬಿಡುಗಡೆ ಮಾಡುವರು. ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸಮ್ಮೇಳನಾಧ್ಯಕ್ಷರ ಭಾಷಣ ಪ್ರತಿ ಬಿಡುಗಡೆ ಮಾಡುವರು. ಸಮ್ಮೇಳನಾಧ್ಯಕ್ಷರಾಗಿ ಬೀರೂರಿನ ಡಾ.ಸಿ.ಎಮ್. ಸುಲೋಚನ ಭಾಗವಹಿಸುವರು. ಚಿಕ್ಕಮಗಳೂರು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷೆ ಕು.ಬಿ.ಸಿ.ಗೀತಾ, ರವೀಂದ್ರ ಕುಕ್ಕಡಿಗೆ, ಹೆಚ್.ಎಮ್.ಲೋಕೇಶ್, ಕೆ.ಟಿ. ವೆಂಕಟೇಶ, ಉಮಾದೇವಿ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಹರಪನಹಳ್ಳಿ ವರಸದ್ಯೋಜಾತ ಶ್ರೀಗಳು, ಕಾರ್ಜುವಳ್ಳಿ ಸದಾಶಿವ ಶ್ರೀಗಳು ಉಪಸ್ಥಿತರಿರುವರು.

ಸಂಜೆ 6.30ಕ್ಕೆ ಜರುಗುವ ಸಮಾರೋಪ ಸಮಾರಂಭದಲ್ಲಿ ಸಚಿವರಾದ ಕೆ.ಎಸ್. ಈಶ್ವರಪ್ಪ, ವಿ.ಸುನೀಲ ಕುಮಾರ್, ಮಾಜಿ ಶಾಸಕ ವೈ.ಎಸ್.ವಿ.ದತ್ತಾ, ಮಾಜಿ ವಿ.ಪ.ಸದಸ್ಯೆ ಗಾಯತ್ರಿ ಶಾಂತೇಗೌಡ, ಅನಿವಾಸಿ ಭಾರತೀಯ ಸಮಿತಿ ಮಾಜಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಅ.ಭಾ.ವೀ.ಮ. ಮಹಿಳಾ ಘಟಕದ ಅಧ್ಯಕ್ಷೆ ಬಿ.ವೈ. ಅರುಣಾದೇವಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಕ.ಸಾ.ಪ. ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ, ಕೆ.ಎನ್.ರುದ್ರಪ್ಪ, ಹೆಚ್.ಟಿ.ರಾಜೇಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವಾಣಿ ಚಂದ್ರಯ್ಯ ನಾಯ್ಡು ಹಾಗೂ ಭಾಗ್ಯ ನಂಜು0ಡಸ್ವಾಮಿ ಇವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕರ್ನಾಟಕ ಜಾನಪದ ಅಕ್ಯಾಡೆಮಿಯ ಅಧ್ಯಕ್ಷೆ ಡಾ. ಮಾತಾ ಬಿ.ಮಂಜಮ್ಮ ಜೋಗತಿ ಸಮಾರೋಪ ನುಡಿ ನುಡಿಯುವರು.

ರಾಯಚೂರಿನ ಶಾಂತಮಲ್ಲ ಶ್ರೀಗಳು, ಹಂಪಸಾಗರದ ಅಭಿನವ ಶಿವಲಿಂಗ ಶ್ರೀಗಳು ಸಮಾರಂಭದಲ್ಲಿ ಉಪಸ್ಥಿತರಿರುವರು. ಸಮ್ಮೇಳನದ ಅಂಗವಾಗಿ ‘ಕೃಷಿ-ಸಂಸ್ಕೃತಿ’ ‘ಮಹಿಳೆ-ತಂತ್ರಜ್ಞಾನ-ಸಾಧಕರು’ ಕುರಿತ ವಿಶೇಷ ಗೋಷ್ಠಿಗಳು ಹಾಗೂ ಕವಿ ಗೋಷ್ಠಿ ನಡೆಯಲಿವೆ.

18 ರಂದು ವಸಂತೋತ್ಸವ ಮತ್ತು ಭದ್ರಾ ನದಿ ತೀರದಲ್ಲಿ ಸುರಗೀ ಸಮಾರಾಧನೆ ನಡೆಯುವುದು.

16 ರಂದು ಪ್ರಾತ:ಕಾಲ ಶಿವದೀಕ್ಷಾ-ಅಯ್ಯಾಚಾರ ನೆರವೇರಲಿದ್ದು ಅಪೇಕ್ಷಿತರು ಶ್ರೀ ಪೀಠದ ಕಾರ್ಯಾಲಯದಲ್ಲಿ ಹೆಸರನ್ನು ಮುಂಚಿತವಾಗಿ ನೋಂದಾಯಿಸಬೇಕು ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದರು.


ವರದಿ: ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ,
ಬಾಳೆಹೊನ್ನೂರು

Related Articles

ಪ್ರತಿಕ್ರಿಯೆ ನೀಡಿ

Latest Articles